ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಇಂದು ಗ್ರಾಮೀಣ ದಸರಾ

Srinivasa Murthy VN
Updated On : 26 Sept 2013, 12:26 pm

ಪಿರಿಯಾಪಟ್ಟಣ: ಸೆ. 26 ರಂದು ಪಿರಿಯಾಪಟ್ಟಣದಲ್ಲಿ ಏರ್ಪಡಿಸಲಾಗಿರುವ ಗ್ರಾಮೀಣ ದಸರಾ ಮಹೋತ್ಸವಕ್ಕೆ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಹಸೀಲ್ದಾರ್ ಎಂ.ಕೆ. ಸವಿತಾ ಕೋರಿದರು.
ಗ್ರಾಮೀಣ ದಸರಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ 9ಕ್ಕೆ ಪಟ್ಟಣದ ಕನ್ನಂಬಾಡಿ ಅಮ್ಮನವರ ದೇವಸ್ಥಾನದ ಮುಂಭಾಗದಿಂದ ಸ್ತಬ್ದ ಚಿತ್ರಗಳ ಮತ್ತು ಕಲಾ ತಂಡಗಳ ಮೆರವಣಿಗೆ ಏರ್ಪಡಿಸಲಾಗಿದ್ದು, ವಿಶೇಷವಾಗಿ ಕೇರಳದ ಚಂಡೆ ಹಾಗೂ ಟಿಬೆಟಿಯನ್ನರ ಸಾಂಸ್ಕೃತಿಕ ವಾದ್ಯಗಳು ಗಮನ ಸೆಳೆಯಲಿದ್ದು, 8 ಸ್ತಬ್ಧ ಚಿತ್ರಗಳು ಹಾಗೂ 12 ಕಲಾತಂಡಗಳು ಪಾಲ್ಗೊಳ್ಳಲಿವೆ.
 ಮೆರವಣಿಗೆಯು ದೇವಾಲಯದ ಮುಂಭಾಗದಿಂದ ಬಿ.ಎಂ. ರಸ್ತೆಯ ಮೂಲಕ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಯವರೆಗೆ ಹಾಗೂ ಅಲ್ಲಿಂದ ವೇದಿಕೆ ಕಾರ್ಯಕ್ರಮ ಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿರುವ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದವರೆಗೆ ಮೆರವಣಿಗೆ ನಡೆಯಲಿದೆ.
ಬೆಳಿಗ್ಗೆ 11ಕ್ಕೆ ಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿರುವ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ವಿಶೇಷವಾಗಿ ಟಿಬೆಟಿಯನ್ನರ ಸಾಂಪ್ರದಾಯಕ ನೃತ್ಯ ಹಾಗೂ ಸ್ಥಳೀಯ ಕಲಾವಿದರ ಕಲಾ ಪ್ರದರ್ಶನಗಳು ಸೇರಿದಂತೆ 20 ಕ್ಕೂ ಹೆಚ್ಚು ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.
ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗಾಗಿ ಲಘು ಉಪಹಾರದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಉಪಹಾರದ ನಂತರವೂ ಮಧ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮಗಳು ಮುದುವರೆಯಲಿವೆ.
ಶಾಸಕ ಕೆ. ವೆಂಕಟೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಎಚ್. ವಿಶ್ವನಾಥ್, ಜಿಪಂ ಅಧ್ಯಕ್ಷರಾದ ಕೂರ್ಗಳ್ಳಿ ಮಹದೇವ್, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಸಂದೇಶ್ ನಾಗರಾಜ್, ಗೋ. ಮಧುಸೂದನ್ ಸೇರಿದಂತೆ ಆರ್. ಧರ್ಮಸೇನ, ಜಿಪಂ ಉಪಾಧ್ಯಕ್ಷೆ ಭ್ರಮರಾಂಭ ಮಲ್ಲಿಕಾರ್ಜುನಸ್ವಾಮಿ, ತಾಪಂ ಅಧ್ಯಕ್ಷೆ ಬಿ. ಪವಿತ್ರಾ, ಉಪಾಧ್ಯಕ್ಷ ಎಚ್.ಎಸ್. ಪ್ರಕಾಶ್, ದಸರಾ ಮಹೋತ್ಸವದ ವಿವಿಧ ಸಮಿತಿಗಳ ಪದಾಧಿಕಾರಿಗಳು ಹಾಗೂ ಮತ್ತಿತರರು ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement