ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಒಳಚರಂಡಿ ನಿರ್ಮಾಣಕ್ಕೆ ಅಸ್ತು

Vishwanath S
Updated On : 28 Sept 2013, 12:30 pm

ಕ.ಪ್ರ.ವಾರ್ತೆ ,  ಪಿರಿಯಾಪಟ್ಟಣ ,  ಸೆ. 27
ಪಟ್ಟಣಕ್ಕೆ ಒಳಚರಂಡಿ ನಿರ್ಮಿಸಲು ರಾಜ್ಯ ಸರ್ಕಾರವು ಅನುಮೋದನೆ ನೀಡಿದ್ದು, ಇದು ಕೇಂದ್ರ ಸರ್ಕಾರದ ಮಂಜೂರಾತಿಯ ಹಂತದಲ್ಲಿದ್ದು, ಅನುಮೋದನೆ ದೊರೆತ ನಂತರ 32 ಕೋಟಿಗಳಲ್ಲಿ ಒಳಚರಂಡಿ ನಿರ್ಮಿಸಲು ಕ್ರಮ ಕೈಗೊಳ್ಳುವುದಾಗಿ ಶಾಸಕ ಕೆ. ವೆಂಕಟೇಶ್ ಹೇಳಿದರು.
ಸಂತೆಮಾಳದಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಅಭಿವೃದ್ಧಿ ಇಲಾಖೆ ವತಿಯಿಂದ 5 ಕೋಟಿಗಳಲ್ಲಿ ಅಭಿವೃದ್ಧಿಪಡಿಸಲಿರುವ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಸಾಮಾನ್ಯ ಜನರಿಗೆ ಅನುಕೂಲವಾಗುವ ಅಭಿವೃದ್ಧಿಗಳನ್ನು ಮಾಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಭಿವೃದ್ಧಿ ಕೆಲಸಗಳನ್ನು ಮಾಡುವಾಗ ಸಾಮಾನ್ಯ ಜನರ ಸಹಕಾರವು ಅತ್ಯಗತ್ಯವಾಗಿದೆ ಎಂದರು.
ಮಸಣಿಕಮ್ಮ ದೇವಸ್ಥಾನದ ಸುತ್ತ ಅಭಿವೃದ್ಧಿಪಡಿಸಲು 1.50 ಕೋಟಿ ಮಂಜೂರಾಗಿದ್ದು, ಕೆಲವೇ ದಿನಗಳಲ್ಲಿ ಚಾಲನೆ ನೀಡಲಾಗುವುದು. ಪಪಂ ನೂತನ ಕಟ್ಟಡವನ್ನು ಬೆಳದಿಂಗಳ ಕಟ್ಟೆಯ ನಿವೇಶನದಲ್ಲಿ ನಿರ್ಮಾಣ ಮಾಡಲು ಹಾಗೂ ಸರ್ಕಾರದಿಂದ ಮಂಜೂರಾಗಿರುವ 3.50 ಕೋಟಿ ಅನುದಾನದಲ್ಲಿ ಕನ್ನಡ ಭವನ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಹಸೀಲ್ದಾರ್ ಎಂ.ಕೆ. ಸವಿತಾ, ಪಪಂ ಮುಖ್ಯಾಧಿಕಾರಿ ಪಂಕಜರೆಡ್ಡಿ, ಸದಸ್ಯರಾದ ಸಣ್ಣಪ್ಪ, ಸುವರ್ಣ, ತ್ರಿಣೇಶ್, ರತ್ನ, ಅಜೀದ್, ಸಣ್ಣಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement