ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಮೈಸೂರು- ಟಿ. ನರಸೀಪುರ ದ್ವಿಪಥ ರಸ್ತೆಗೆ ಆಗ್ರಹ

Vishwanath S
Updated On : 28 Sept 2013, 12:30 pm

ಕ.ಪ್ರ.ವಾರ್ತೆ ,  ಟಿ.ನರಸೀಪುರ ,  ಸೆ. 27
ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಷ್ಟ್ರೀಯ ಹೆದ್ದಾರಿ 212ರ ಮೈಸೂರು- ನರಸೀಪುರ ಮುಖ್ಯ ರಸ್ತೆಯನ್ನು ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜು ಒತ್ತಾಯಿಸಿದರು.
ರಾಷ್ಟ್ರೀಯ ಹೆದ್ದಾರಿಯಾಗಿರುವ ನರಸೀಪುರ- ಮೈಸೂರು ಮುಖ್ಯ ರಸ್ತೆ ಕಿರಿದಾಗಿದ್ದು, ಸಂಚರಿಸುವ ವಾಹನಗಳ ದಟ್ಟಣೆ ದಿನನಿತ್ಯ ಹೆಚ್ಚುತ್ತಿದೆ. ಸಂಚಾರದ ಸಮಯವನ್ನು ಮಿತಗೊಳಿಸುವ ಭರದಲ್ಲಿ ವೇಗವಾಗಿ ಚಲಿಸುವ ವಾಹನಗಳಿಂದ ನಿತ್ಯ ಸಂಭವಿಸುವ ಅಪಘಾತದಿಂದ ಸಾವು ನೋವು ಉಂಟಾಗುತ್ತಿವೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೈಸೂರು ರಸ್ತೆಯಲ್ಲಿ ದ್ವಿಚಕ್ರ ವಾಹನಗಳು ಸಂಚರಿಸುವಾಗ ಸವಾರರಿಗೆ ಪ್ರಾಣಕ್ಕೆ ಅಪಾಯವೆಂಬುದು ಕಟ್ಟಿಟ್ಟಬುತ್ತಿ. ಸಂಚರಿಸುವ ವಾಹನಗಳ ದಟ್ಟಣೆ ಪರಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಪಾದಚಾರಿಗಳು ಕಾಲಿಡುವುದು ಕಷ್ಟ ಎನ್ನುವಂತಹ ಪರಿಸ್ಥಿತಿ ಇದೆ ಎಂದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಸಾವು ನೋವಿನ ಗಂಭೀರತೆಯನ್ನು ಅರಿತು ಆಡಳಿತಾರೂಢ ಸರ್ಕಾರ ತುರ್ತು ಕ್ರಮ ಕೈಗೊಂಡು ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಬೇಕು. ಇಲ್ಲದಿದ್ದರೆ ಬಿಜೆಪಿ ವತಿಯಿಂದ ರಸ್ತೆಯ ಅಭಿವೃದ್ಧಿಗಾಗಿ ಪ್ರತಿಭಟನೆ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮೂಗೂರು ಗ್ರಾಪಂ ಸದಸ್ಯ ಎಂ.ಎಂ. ಜಯಣ್ಣ, ವಾಟಾಳ್ ಮಹದೇವಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement