ಮಂಡ್ಯಕ್ಕೆ ರಸ್ತೆ ಮೂಲಕ ಸೋನಿಯಾ ಪಯಣ
ಕ.ಪ್ರ.ವಾರ್ತೆ , ಮೈಸೂರು , ಸೆ. 30
ಕೇರಳದಿಂದ ಮೈಸೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಸ್ತೆ ಮೂಲಕ ಮಂಡ್ಯಕ್ಕೆ ತೆರಳಿದರು.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ಸೋನಿಯಾ ಗಾಂಧಿ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.
ವಿಮಾನ ನಿಲ್ದಾಣದಿಂದ ಮಂಡ್ಯದ ತೂಬಿನಕೆರೆ ಹೆಲಿಪ್ಯಾಡ್ಗೆ ಹೆಲಿಕಾಪ್ಟರ್ ಮೂಲಕ ಸೋನಿಯಾ ಗಾಂಧಿ ಅವರು ಪ್ರಯಾಣಿಸಬೇಕಿತ್ತು. ಆದರೆ, ಪ್ರತಿಕೂಲ ಹವಾಮಾನದಿಂದಾಗಿ ರಸ್ತೆ ಮೂಲಕ ಮಂಡ್ಯಕ್ಕೆ ತೆರಳಿದರು.
ಮಂಡ್ಯ ಕಾರ್ಯಕ್ರಮ ಮುಗಿದ ನಂತರ ತೂಬಿನಕೆರೆ ಹೆಲಿಪ್ಯಾಡ್ನಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ನಲ್ಲಿ ಆಗಮಿಸಿದರು. ಸಂಜೆ 5.45ಕ್ಕೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದರು.