ನಾಳೆ ಚದುರಂಗ
ಮೈಸೂರು: ಮೈಸೂರು ಚೆಸ್ ಕ್ಲಬ್ 12 ವರ್ಷದೊಳಗಿನ ಬಾಲಕ, ಬಾಲಕಿಯರಿಗೆ ಮುಕ್ತ ಚದುರಂಗ ಪಂದ್ಯಾವಳಿಯನ್ನು ಏ.3 ರಂದು ಸಂಜೆ 6ಕ್ಕೆ ಸರಸ್ವತಿಪುರಂ ಪೊಲೀಸ್ ಠಾಣೆ ಬಳಿ ಇರುವ ಜ್ಞಾನೋದಯ ಪಿಯು ಕಾಲೇಜಿನಲ್ಲಿ ಏರ್ಪಡಿಸಿದೆ. ಆಸಕ್ತರು ಅದೇ ದಿನ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ 9880547121 ಸಂಪರ್ಕಿಸುವಂತೆ ಸಂಸ್ಥೆ ಗೌರವ ಕಾರ್ಯದರ್ಶಿ ಕೆ.ಜಿ. ಜಯಪ್ರಕಾಶ್ ತಿಳಿಸಿದ್ದಾರೆ.
ತರಬೇತಿ ಶಿಬಿರ
ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಐಎಎಸ್, ಕೆಎಎಸ್ ತರಬೇತಿ ಶಿಬಿರದ ಶುಭ ಹಾರೈಕೆ ಕಾರ್ಯಕ್ರಮವು ಏ.3 ರಂದು ನಡೆಯಲಿದೆ. ಅಂದು ಸಂಜೆ 6ಕ್ಕೆ ಮಹಾರಾಣಿ ಎನ್ಟಿಎಂ ಶಾಲೆಯಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಅಧ್ಯಯನ ಪುಸ್ತಕವನ್ನು ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಬಿಡುಗಡೆ ಮಾಡುವರು. ಜಿ.ಪಂ. ಸಿಇಒ ಪಿ.ಎ. ಗೋಪಾಲ್ ಶುಭ ಹಾರೈಕೆ ನೀಡುವರು. ಸಂತ ಫಿಲೋಮಿನಾ ಕಾಲೇಜಿನ ಪ್ರಾಧ್ಯಾಪಕ ಎಂ. ಕೃಷ್ಣೇಗೌಡ ಅಧ್ಯಕ್ಷತೆ ವಹಿಸುವರು ಎಂದು ಪ್ರಧಾನ ಕಾರ್ಯದರ್ಶಿ ಜೈನಹಳ್ಳಿ ಸತ್ಯನಾರಾಯಣ ಗೌಡ ತಿಳಿಸಿದ್ದಾರೆ.
ಬೇಸಿಗೆ ಶಿಬಿರ
ಜಯನಗರದ ವಿವೇಕಾನಂದ ಕೇಂದ್ರ ಕನ್ಯಾಕುಮಾರಿ ಮೈಸೂರು ಶಾಖೆಯು ಶಾಲಾ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮತ್ತು ಭಾರತೀಯ ಸಂಸ್ಕೃತಿಯ ಅರಿವು ಮೂಡಿಸುವ ದೃಷ್ಟಿಯಲ್ಲಿ ಏ.3 ರಿಂದ 7 ರವರೆಗೆ ಪ್ರತಿದಿನ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ವಿಕಸನ ಬೇಸಿಗೆ ಶಿಬಿರ ಆಯೋಜಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 9449488228 ಸಂಪರ್ಕಿಸಬಹುದು.
ಉಚಿತ ತಪಾಸಣೆ
ಲಕ್ಷ್ಮೀಪುರಂ ಪ್ರೀತಿ ಕ್ಯಾನ್ಸರ್ ಸೆಂಟರ್ ವತಿಯಿಂದ ಕ್ಯಾನ್ಸರ್ ಉಚಿತ ತಪಾಸಣೆ ಶಿಬಿರವನ್ನು ಏರ್ಪಡಿಸಿದೆ. ಆಸಕ್ತರು ಮಾಹಿತಿಗೆ ದೂ.0821 4259259 ಸಂಪರ್ಕಿಸುವಂತೆ ತಿಳಿಸಿದ್ದಾರೆ.
ತರಬೇತಿ
ಗುರು ರಾಘವೇಂದ್ರ ಕಂಪ್ಯೂಟರ್ ತರಬೇತಿ ಕೇಂದ್ರವು ಕಂಪ್ಯೂಟರ್ ಮತ್ತು ಮೊಬೈಲ್ ದುರಸ್ತಿ ತರಬೇತಿ ನೀಡಲಿದ್ದು, ಆಸಕ್ತರು ಏ.3 ರೊಳಗೆ ಮೊ.77602 40575
ಹುಟ್ಟುಹಬ್ಬ
ವಿಜಯ ಕನ್ನಡ ರಕ್ಷಣಾ ವೇದಿಕೆ ರಾಜ್ಯ ಗೌರವಾಧ್ಯಕ್ಷ ಎಸ್.ವೆಂಕಟೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಗಣ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ರೋಟರಿ ಶಾಲೆಯ ದೇವೇಗೌಡ ಸಭಾಂಗಣದಲ್ಲಿ ಮಾ.3 ರಂದು ಮಧ್ಯಾಹ್ನ 12ಕ್ಕೆ ಏರ್ಪಡಿಸಿದೆ ಎಂದು ಜಿಲ್ಲಾಧ್ಯಕ್ಷ ಎನ್.ರಾಮಕೃಷ್ಣ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.