ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಆರು ಮಂದಿ ಗಡಿಪಾರು

Rashmi Kasaragodu
Updated On : 3 Apr 2014, 12:56 pm

ಮೈಸೂರು: ಸಮಾಜಘಾತುಕ ಚಟುವಟಿಕೆಯಲ್ಲಿ ತೊಡಗಿದ್ದ 6 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ ಎಂದು ಎಸ್ಪಿ ಅಭಿನವ್ ಖರೆ ತಿಳಿಸಿದರು.
18 ಮಂದಿ ಸಮಾಜಘಾತುಕ ಶಕ್ತಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲು ಜಿಲ್ಲಾಧಿಕಾರಿಯವರಿಗೆ ಶಿಫಾರಸು ಮಾಡಿದ್ದೆವು. ಈವರೆಗೆ ನಡೆದ ವಿಚಾರಣೆಯಲ್ಲಿ 6 ಮಂದಿಯನ್ನು ಗಡಿಪಾರು ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉಳಿದವರ ವಿಚಾರಣೆ ನಡೆಯುತ್ತಿದೆ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಿಲ್ಲೆಯಲ್ಲಿ ಸುಗಮ ಮತದಾನಕ್ಕೆ ಸಕಲ ಸಿದ್ಧತೆ ನಡೆದಿದ್ದು, ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಬರುವ 1869 ಮತಗಟ್ಟೆಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಕಳೆದ ಚುನಾವಣೆಯಲ್ಲಿ ಶೇ.95 ಹೆಚ್ಚು ಮತದಾನ ನಡೆದ, ಒಂದೇ ಅಭ್ಯರ್ಥಿಗೆ ಶೇ.75 ಮತಗಳು ಸಿಕ್ಕ ಹಾಗೂ ಮತದಾರರ ಪಟ್ಟಿಯಲ್ಲಿ ಅತಿ ಹೆಚ್ಚು ಜನರ ಹೆಸರು ನಾಪತ್ತೆಯಾದ ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಎಂದು ಪರಿಗಣಿಸಲಾಗಿದೆ. 200ಕ್ಕೂ ಹೆಚ್ಚು ಸೂಕ್ಷ್ಮ ಮತಗಟ್ಟೆಗಳನ್ನು ಜಿಲ್ಲೆಯಲ್ಲಿ ಪತ್ತೆ ಹಚ್ಚಿ, ಸಾರ್ವಜನಿಕರೊಂದಿಗೆ ಸಭೆಗಳನ್ನು ನಡೆಸಲಾಗಿದೆ. ಈ ಸ್ಥಳಗಳಿಗೆ ಸೂಕ್ಷ್ಮ ಮತಗಟ್ಟೆ ಅಧಿಕಾರಿ, ಸಿಸಿ ಕ್ಯಾಮರಾ ಹಾಗೂ ಪ್ಯಾರಾ ಮಿಲಿಟರಿ ಪಡೆ ನಿಯೋಜಿಸಲಾಗುವುದು ಎಂದು ತಿಳಿಸಿದರು.
ಈವರೆಗೂ ಜಿಲ್ಲೆಯಲ್ಲಿ 302 ಲೀಟರ್ ಮದ್ಯ ವಶಪಡಿಸಿಕೊಂಡು, 112 ಪ್ರಕರಣಗಳನ್ನು ದಾಖಲಿಸಲಾಗಿದೆ. 900 ಮಂದಿಯ ವಿರುದ್ಧ ವಿವಿಧ ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ 1050 ಗೃಹರಕ್ಷಕರಿದ್ದು, ಹೆಚ್ಚುವರಿ ಭದ್ರತೆಗೆ ಕೇರಳ, ತಮಿಳುನಾಡಿನಿಂದ ಭದ್ರತಾ ಸಿಬ್ಬಂದಿ ನಿಯೋಜಿಸಲು ಕೋರಿಕೆ ಸಲ್ಲಿಸಲಾಗಿದೆ ಎಂದರು.



ಸಿಐಡಿ ತನಿಖೆಗೆ ಸಹಕಾರ
ಕೇರಳಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ನಿಂದ ಹಣ ಡಕಾಯಿತಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿರುವುದಾಗಿ ಎಸ್ಪಿ ಅಭಿನವ್ ಅಶೋಕ್ ಖರೆ ತಿಳಿಸಿದರು. ದಕ್ಷಿಣ ವಲಯ ಐಜಿಪಿ ಅವರ ಗನ್‌ಮ್ಯಾನ್ ಪ್ರಕಾಶ್ ಬಗ್ಗೆ ಸಿಐಡಿ ಪೊಲೀಸರು ಮಾಹಿತಿ ಕೇಳಿದರು. ಅದೇ ರೀತಿ ನಾವು ಮಾಹಿತಿ ಒದಗಿಸಿದ್ದೇವೆ. ತನಿಖೆ ನಂತರ ಪ್ರಕರಣದಲ್ಲಿ ಅವರ ಕೈವಾಡ ಇರುವುದು ಗೊತ್ತಾದ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement