ಕಾಂಗ್ರೆಸ್ ಪ್ರಚಾರಕ್ಕೆ ಮಂಜುನಾಥ್ ಚಾಲನೆ
ಮೈಸೂರು: ಚಾಮುಂಡೇಶ್ವರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದಿಂದ ಹಮ್ಮಿಕೊಂಡಿದ್ದ ಮೈಸೂರು ಲೋಕಸಭಾ ಕ್ಷೇತ್ರದ ಪ್ರಚಾರಕ್ಕೆ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಎನ್.ಮಂಜುನಾಥ್ ಚಾಲನೆ ನೀಡಿದರು. ಮಾಜಿ ಶಾಸಕ ಎಂ.ಸತ್ಯನಾರಾಯಣ, ಜಿಪಂ ಅಧ್ಯಕ್ಷ ಕೂರ್ಗಳ್ಳಿ ಎಂ.ಮಹದೇವು, ಕೆಪಿಸಿಸಿ ಸದಸ್ಯ ಕೆ.ಮರೀಗೌಡ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಡಿ.ಪದ್ಮನಾಭ, ಜಿಪಂ ಸದಸ್ಯ ಜವರಪ್ಪ, ಎಪಿಎಂಸಿ ಉಪಾಧ್ಯಕ್ಷ ಸಿದ್ದಯ್ಯ, ಮುಖಂಡರಾದ ಅರ್ಕೇಶ್ವರ್, ದೀಪಕ್ ಯಶ್ರಂಗ್ಸ್, ಬಸವರಾಜ್ ನಾಯ್ಕ, ಪರಮೇಶ್ವರ್ ಇದ್ದರು.