ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಬಿಎಸ್ಪಿ ಕಾರ್ಯಕರ್ತರಿಂದ ಪ್ರಚಾರ

Rashmi Kasaragodu
Updated On : 4 Apr 2014, 2:07 am

ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ಹಾಗೂ ಚಾಮರಾಜನಗರ ಮೀಸಲು ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿಗಳ ಪರವಾಗಿ ಕಾರ್ಯಕರ್ತರು ನಗರದ ಪುರಭವನದ ಬಳಿ ಇರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯಿಂದ ಗುರುವಾರ ಪ್ರಚಾರ ಆರಂಭಿಸಿದರು. ಮೈಸೂರು ಅಭ್ಯರ್ಥಿ ಸಿ.ಮೋಹನಕುಮಾರ್, ಚಾಮರಾಜನಗರ ಅಭ್ಯರ್ಥಿ ಶಿವಮಲ್ಲು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಗಾಂಧಿಚೌಕದ ಬಳಿ ಇರುವ ಗಾಂಧಿ ಪ್ರತಿಮೆಗೂ ಮಾಲಾರ್ಪಣೆ ಮಾಡಿದ ನಂತರ ನಗರದ ಪಾದಯಾತ್ರೆ ನಡೆಸಿ ಮತಯಾಚಿಸಲಾಯಿತು. ಪಾದಯಾತ್ರೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement