ನೇಮಕ
ಮೈಸೂರು: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪರಿಷತ್ ಸದಸ್ಯರಾಗಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಪಿ.ಮಂಜು ನಾಥ್ ನೇಮಕವಾಗಿದ್ದಾರೆ. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಜಿಲ್ಲೆಯಿಂದ ಇವರು ಆಯ್ಕೆಯಾಗಿದ್ದು, ಇದಕ್ಕೂ ಮೊದಲು ತೋಂಟದಾರ್ಯ ಹಾಗೂ ಸಿ.ಎಚ್. ವಿಜಯಶಂಕರ್ ಕಾರ್ಯನಿರ್ವಹಿಸಿದ್ದರು.
ಎತ್ತಿನಗಾಡಿ ಓಟ
ಕೆ.ಆರ್. ನಗರ: ತಾಲೂಕಿನ ಕರ್ತಾಳು ಗ್ರಾಮದ ಶ್ರೀರಾಮ ಯುವಕರ ಸಂಘದ ವತಿಯಿಂದ ಶ್ರೀರಾಮ ನವಮಿ ಪ್ರಯುಕ್ತ ಏ.10 ರಂದು ಎತ್ತಿನ ಗಾಡಿ ಓಟದ ಸ್ಪರ್ಧೆ ಏರ್ಪಡಿಸಿದೆ. ಚಕ್ರದ ಗಾಡಿಗೆ 750, ಮರಳು ಗಾಡಿಗೆ 500, ಪ್ರವೇಶ ಶುಲ್ಕವನ್ನು ಸ್ಪರ್ಧೆಯಲ್ಲಿ ಭಾಗವಹಿಸುವವರು ಪಾವತಿಸಬೇಕಿದ್ದು, ಹೆಚ್ಚಿನ ವಿವರಗಳಿಗೆ ಎಸ್. ಧರ್ಮೇಶ್, ಮೊ. 9902299095 ಸಂಪರ್ಕಿಸಬಹುದು.
ಡಿಕ್ಕಿ: ವ್ಯಕ್ತಿ ಸಾವು
ಹುಣಸೂರು: ಪಟ್ಟಣದ ಮೈಸೂರು ಹೆದ್ದಾರಿಯ ಸೋಮನಹಳ್ಳಿ ಬಳಿ ಬೈಕ್ಗೆ ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ತಾಲೂಕಿನ ಬಿಳಿಕೆರೆ ಹೋಬಳಿಯ ಗಾಗೇನಹಳ್ಳಿಯ ಜಯರಾಮೇಗೌಡರ ಪುತ್ರ ಶಿವಕುಮಾರ್(24) ಮೃತಪಟ್ಟ ವ್ಯಕ್ತಿ. ಹೆರಿಗೆಗೆ ಹೋಗಿದ್ದ ಪತ್ನಿಯನ್ನು ನೋಡಿಕೊಂಡು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದಾಗ ಹುಣಸೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಶಿವಕುಮಾರ್ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಮಿಕ ಸಾವು
ಮೈಸೂರು: ಮರಳು ತುಂಬಿದ ಲಾರಿ ಉರುಳಿ ಬಿದ್ದು ಕೂಲಿ ಕಾರ್ಮಿಕನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಟಿ.ನರಸೀಪುರ ರಸ್ತೆಯಲ್ಲಿರುವ ಆಲನಹಳ್ಳಿ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ಟಿ.ನರಸೀಪುರ ತಾಲೂಕಿನ ಇಂಡವಾಳು ಗ್ರಾಮದ ನಿವಾಸಿ ಮೂರ್ತಿ (40) ಮೃತಪಟ್ಟವರು. ಅದೇ ಗ್ರಾಮದ ಮಹೇಶ್ ಮತ್ತು ರಾಚಯ್ಯ ಎಂಬವರು ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಮರಳು ತುಂಬಿದ ಲಾರಿಯು ಟಿ.ನರಸೀಪುರದಿಂದ ಮೈಸೂರಿನತ್ತ ಬರುತ್ತಿತ್ತು. ಈ ವೇಳೆ ಎದುರಿನಿಂದ ಬಂದ ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಉರುಳಿ ಬಿದ್ದಿದೆ. ಈ ವೇಳೆ ಕಾರ್ಮಿಕನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.