ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಅಚರಣೆ

Rashmi Kasaragodu
Updated On : 6 Apr 2014, 1:05 am

ಮೈಸೂರು: ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 107ನೇ ಜನ್ಮ ದಿನವನ್ನು ವಿವಿಧ ಸಂಘಸಂಸ್ಥೆಗಳು ಶನಿವಾರ ಆಚರಿಸಿದವು.
ಪ್ರತಾಪ್ ನಮನ
ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ಡಾ.ಬಾಬು ಜಗಜೀವನರಾಂ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮೈಸೂರು ನಗರಾಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಎಲ್.ನಾಗೇಂದ್ರ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಪಿ. ಮಂಜುನಾಥ್, ನಗರ ಪಾಲಿಕೆ ಮಾಜಿ ಸದಸ್ಯ ಎಂ.ಡಿ ಪಾರ್ಥಸಾರಥಿ ಮುಂತಾದವರು ಇದ್ದರು.
ಬಿಜೆಪಿ ಎಸ್ಸಿ ಮೋರ್ಚಾ
ನಗರದ ರೇಲ್ವೆ ನಿಲ್ದಾಣದ ಬಳಿ ಇರುವ ವೃತ್ತದಲ್ಲಿನ ಜಗಜೀವನರಾಂ ಪ್ರತಿಮೆಗೆ ಸಮಿತಿ ಪದಾಧಿಕಾರಿಗಳು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಚಾಮರಾಜ ಕ್ಷೇತ್ರದ ಅಧ್ಯಕ್ಷ ಸೋಮಶೇಖರ ರಾಜ್, ಎಸ್ಸಿ ಮೋರ್ಚಾ ಅಧ್ಯಕ್ಷ ಡಿ.ಮಹದೇವ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಉಪಾಧ್ಯಕ್ಷ ರಾಜೇಶ್, ಮುಖಂಡರಾದ ವಾಣೀಶ್, ಮಹೇಶ್. ಸತೀಶ್, ಸುರೇಂದ್ರ, ವೈರಪ್ಪ, ರವಿಚಂದ್ರಸ್ವಾಮಿ ಮುಂತಾದವರು ಇದ್ದರು.
ಕಾರ್ಮಿಕರಿಂದ
ಕರ್ನಾಟಕ ರಾಜ್ಯ ಭಾರತಮಾತಾ ಕಟ್ಟಡ ಕಾರ್ಮಿಕ ಸಂಘದವರು ಡಾ.ಬಾಬು ಜಗಜೀವನರಾಂ ಜನ್ಮದಿನದ ಅಂಗವಾಗಿ ಅವರ ಪ್ರತಿಮೆ ಮಾಲಾರ್ಪಣೆ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಸಿ. ಸಿದ್ದರಾಜು, ಜಿಲ್ಲಾಧ್ಯಕ್ಷ ಸಿ.ಕುಮಾರ್, ಪದಾಧಿಕಾರಿಗಳಾದ ಅಕ್ರಂ, ರಸೂಲ್, ಎಸ್. ಸಿದ್ದರಾಜು, ಸುರೇಶ್, ಆರ್. ಸಿದ್ಧಾರ್ಥ, ಜೆ. ಅಜಯ್‌ಕುಮಾರ್, ಶಿವನಂಜು ಉಪಸ್ಥಿತರಿದ್ದರು.
ನೌಕರರಿಂದ: ಡಾ. ಬಾಬು ಜಗಜೀವನರಾಂ ಜನ್ಮದಿನವನ್ನು ಮೈಸೂರು ನಗರ ಪಾಲಿಕೆ ಪರಿಶಿಷ್ಟ ಜಾತಿ ಹಾಗೂ ವರ್ಗದ ನೌಕರರ ಸಂಘವು ಆಚರಿಸಿತು. ಸಂಘದ ಅಧ್ಯಕ್ಷರಾದ ಬಿ.ಎಸ್. ಸುಬ್ರಹಣ್ಯ ನೇತೃತ್ವವದಲ್ಲಿ ಪದಾಧಿಕಾರಿಗಳು ಬಾಜೂಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಉಪಾದ್ಯಕ್ಷ ರಾಜು, ಸಂಚಾಲಕ ಜಿ. ಶಿವಸಿದ್ದು, ಪ್ರಧಾನ ಕಾರ್ಯದರ್ಶಿ ಸುರೇಂದ್ರಕುಮಾರ್ ಮುಖಂಡರಾದ ಬಸವರಾಜು ಇದ್ದರು.
ಡಿ.ಗ್ರೂಪ್‌ನಿಂದ
ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಗ್ರೂಪ್ ಡಿ ಅಡುಗೆಯವರು ಮತ್ತು ಸಹಾಯಕ ನೌಕರರ ಸಂಘವು ಬಾಬೂಜಿ ಜನ್ಮದಿನ ಆಚರಿಸಿತು. ಡಾ.ಬಾಬು ಜಗಜೀವನರಾಂ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸರಸ್ವತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎನ್.ಆರ್. ವಿಜಯ್, ಡಿಡಿಪಿಐ ಎಚ್.ಆರ್.ಬಸಪ್ಪ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ನಾಗಚಂಪ, ಅಧ್ಯಕ್ಷ ಜಿ. ಮಂಟೇಲಿಂಗಯ್ಯ, ಉಪಾಧ್ಯಕ್ಷ ರಾಜು, ಕಾರ್ಯದರ್ಶಿ ಸತೀಶ್ ಹಾಗೂ ಪದಾಧಿಕಾರಿಗಳು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments