ಎಸ್‌ಡಿಪಿಐ ಮತಯಾಚನೆ
ಕೆ.ಆರ್. ನಗರ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿ.ಎಸ್. ಪುಟ್ಟರಾಜು ಅವರನ್ನು ತಾಲೂಕು ಎಸ್‌ಡಿಪಿಐ ಬೆಂಬಲಿಸಲಿದ್ದು, ನಾಳೆಯಿಂದ ಅವರ ಗೆಲುವಿಗೆ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಳ್ಳಲಾಗುತ್ತದೆ ಎಂದು ಎಸ್‌ಡಿಪಿಐ ತಾಲೂಕು ಅಧ್ಯಕ್ಷ ಯಂತ್‌ಖಿಬ್ ಹೇಳಿದರು. ಪಟ್ಟಣದ ವಿನಾಯಕ ಬಡಾವಣೆಯಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್ ಮತ್ತು ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಜೆ.ದ್ವಾರಕೀಶ್ ಅವರ ಜತೆಗೂಡಿ ಜೆಡಿಎಸ್ ಅಭ್ಯರ್ಥಿ ಸಿ.ಎಸ್. ಪುಟ್ಟರಾಜು ಪರ ಮತಯಾಚಿಸಿ ಮಾತನಾಡಿದರು. ಎಸ್‌ಡಿಪಿಐ ಉಪಾಧ್ಯಕ್ಷ ಮಹಮದ್ ಸನಾ, ಕಾರ್ಯದರ್ಶಿ ಮಹಮದ್ ಅಪ್ಸರ್, ಪದಾಧಿಕಾರಿಗಳಾದ ರಿಯಾಜ್ ಷರೀಫ್, ತಾಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೆ.ಎಸ್. ರೇವಣ್ಣ, ವಕ್ತಾರ ಕೆ.ಎಲ್. ರಮೇಶ್, ನಗರ ಜೆಡಿಎಸ್ ಅಧ್ಯಕ್ಷ ಡಿ.ಸಿ. ಮಂಜುನಾಥ್, ಯುವ ಜೆಡಿಎಸ್ ಅಧ್ಯಕ್ಷ ಉಮೇಶ್ ಇದ್ದರು.