ಕಾಂಗ್ರೆಸ್ ಬೆಂಬಲಿಸಲು ಮನವಿ
ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ದಲಿತ ಹಿಂದುಳಿದ ಅಲ್ಪಸಂಖ್ಯಾತರ ಸಮನ್ವಯ ವೇದಿಕೆ ಗೌರವಾಧ್ಯಕ್ಷ ಹರಿಹರ ಆನಂದಸ್ವಾಮಿ ಮನವಿ ಮಾಡಿದರು. ಕೇಂದ್ರ ಸರ್ಕಾರವು ಆರ್ಟಿಇ, ಆರ್ಟಿಐ, ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಅನೇಕ ಜನಪರ ಯೋಜನೆ ಜಾರಿಗೆ ತಂದಿದೆ. ಐಟಿ, ಬಿಟಿಯ ಅಭಿವೃದ್ಧಿಗೆ ಸಾಕಷ್ಟು ಉತ್ತೇಜನ ನೀಡಿದೆ. ಜನಲೋಕಪಾಲ್ ಮಸೂದೆಯನ್ನು ಜಾರಿಗೆ ತಂದಿದೆ. ಅಂತೆಯೇ ರಾಜ್ಯ ಸರ್ಕಾರ ಅನ್ನಭಾಗ್ಯ, ವಿದ್ಯಾಸಿರಿ, ಕ್ಷೀರಭಾಗ್ಯ, ಮನಸ್ವಿನಿಯಂತಹ ಪ್ರಮುಖ ಯೋಜನೆ ಜಾರಿಗೊಳಿಸಿದೆ. ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು. ದಸಂಸ ಸಂಚಾಲಕ ಚುಂಚನಹಳ್ಳಿ ಮಲ್ಲೇಶ್, ದ್ಯಾವಪ್ಪ ನಾಯಕ ಇದ್ದರು.