ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಬಿಜೆಪಿ ಪರ ಗಣೇಶ್ ಪ್ರಚಾರ

Mainashree
Updated On : 8 Apr 2014, 12:06 pm

ಪಿರಿಯಾಪಟ್ಟಣ: ಮಾಜಿ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ಆಡಳಿತಾವಧಿಯಲ್ಲಿ ದೇಶ ರಾಮರಾಜ್ಯದ ನಿಟ್ಟಿನಲ್ಲಿ ಸಾಗಿತ್ತು ಎಂದು ಬಿಜೆಪಿ ಮುಖಂಡ ಎಚ್.ಡಿ. ಗಣೇಶ್ ಹೇಳಿದರು.
ತಾಲೂಕಿನ ಆಲನಹಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್‌ಸಿಂಹ ಅವರ ಪರವಾಗಿ ಮತಯಾಚಿಸಿ ಮಾತನಾಡಿದ ಅವರು, ಎನ್‌ಡಿಎ ಸರ್ಕಾರ ಅಸ್ತಿತ್ವದಲ್ಲಿದ್ದ ವೇಳೆ ಅನೇಕ ಜನಪರ ಯೋಜನೆಗಳು ಅನುಷ್ಠಾನಗೊಂಡವು.
ಅಲ್ಲದೆ ದೇಶದಲ್ಲಿ ಶಾಂತಿ, ನೆಮ್ಮದಿ ನೆಲಸಿತ್ತು. ಬಾಂಗ್ಲಾದೇಶ ಹಾಗೂ ಪಾಕಿಸ್ತಾನದಿಂದ ನುಸುಳಲು ಯತ್ನಿಸುತ್ತಿದ್ದ ಉಗ್ರಗಾಮಿಗಳ ನಿಗ್ರಹಕ್ಕೆ ಸೂಕ್ತ ಕ್ರಮ ಜರುಗಿಸುವ ಮೂಲಕ ದೇಶದ ರಕ್ಷಣೆಗೂ ಒತ್ತು ನೀಡಲಾಗಿತ್ತು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉಗ್ರಗಾಮಿಗಳ ನುಸುಳುವಿಕೆ ಹೆಚ್ಚಾಗಿದ್ದು, ದೇಶದಲ್ಲಿ ರಕ್ಷಣಾ ವ್ಯವಸ್ಥೆ ಅದೊಗತಿಗೆ ತಲುಪಿದೆ. ಇಂತಹ ವೇಳೆಯಲ್ಲಿ ಜನತೆ ಮತ್ತೊಮ್ಮೆ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ದೇಶ ರಕ್ಷಣೆಗೆ ಅವಕಾಶವನ್ನು ನೀಡುವಂತೆ ಮನವಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಗೆದ್ದುಬಂದಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದ್ದು, ಅಭ್ಯರ್ಥಿ ಪ್ರತಾಪ್‌ಸಿಂಹ ಅವರಿಗೆ ಮತ ನೀಡುವ ಮೂಲಕ ನರೇಂದ್ರಮೋದಿ ಅವರನ್ನು  ಪ್ರಧಾನಿಯನ್ನಾಗಿಸುವಂತೆ ಮನವಿ ಮಾಡಿದರು. ಪಕ್ಷದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎಂ. ರಾಜೇಗೌಡ, ಮುಖಂಡ ಬಿ.ಎಸ್.ರಾಮಚಂದ್ರು ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷ ಕೃಷ್ಣೇಗೌಡ, ಮುಖಂಡ ಲೋಕಪಾಲಯ್ಯ, ಮಹದೇವ್, ಚಂದ್ರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement