ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಮೂರೂ ಪಕ್ಷಗಳ ಅಬ್ಬರದ ಪ್ರಚಾರ

Mainashree
Updated On : 8 Apr 2014, 12:14 pm

ಮೈಸೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ನಗರದಲ್ಲಿ ಚುನಾವಣಾ ಪ್ರಚಾರದ ರಂಗು ಕೂಡ ದಿನದಿಂದ ದಿನಕ್ಕೆ ಹೆಚ್ಚ ತೊಡಗಿದೆ.
ಚುನಾವಣಾ ಕಣದಲ್ಲಿರುವ ಪ್ರಮುಖ ಮೂರು ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಮತ್ತು ಪದಾಧಿಕಾರಿಗಳು ನಗರದ ವಿವಿಧೆಡೆ ವ್ಯಾಪಕ ಪ್ರಚಾರ ಕೈಗೊಂಡಿದ್ದಾರೆ. ಸೋಮವಾರ ಬೆಳಗ್ಗೆ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಸಂಸದ ಎಚ್.ವಿಶ್ವನಾಥ್ ಅವರು ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಿದ ಬಳಿಕ ಕೆ.ಆರ್.ಕ್ಷೇತ್ರದ ತ್ಯಾಗರಾಜ ರಸ್ತೆಯಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರು. ಈ ವೇಳೆ ಶಾಸಕರಾದ ಎಂ.ಕೆ.ಸೋಮಶೇಖರ್ ಮತ್ತು ತನ್ವೀರ್ಸೇಠ್ ಅವರು ಸಾಥ್ ನೀಡಿದರು.
ಬಿಜೆಪಿ ಪ್ರಚಾರ: ಮತ್ತೊಂದೆಡೆ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ನಗರದ ವಿವಿಧೆಡೆ ತೆರಳಿ ಮತಯಾಚಿಸಿದರು. ದಿನ ಪೂರ್ತಿ ಮತಯಾಚನೆಯಲ್ಲಿ ತೊಡಗಿದ ಪ್ರತಾಪ್ ಅವರು ವಿಜಯನಗರದ ಕೊಡಗು ಗೌಡ ಸಮಾಜದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮತಯಾಚಿಸಿದರು. ಪ್ರತಾಪ್ ಸಿಂಹ ಅವರ ಪ್ರಚಾರಕ್ಕೆ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಸಾಥ್ ನೀಡಿದ್ದರು.
ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕಿರುವ ಅನಿವಾರ್ಯತೆ ಮತ್ತು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅಧಿಕಾರ ಅವಧಿಯಲ್ಲಿನ ಹಗರಣಗಳು ಮತ್ತು ಲೋಪದೋಷಗಳ ಕುರಿತ ಕರಪತ್ರವನ್ನು ಹಂಚಿ ಮತಯಾಚಿಸಿದರು. ಅಲ್ಲದೆ ವಿಜಯನಗರ ಸುತ್ತಮುತ್ತಲ ಬಡಾವಣೆಗಳ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಜೆಡಿಎಸ್ ಮತಯಾಚನೆ: ಮೈಸೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚಂದ್ರಶೇಖರಯ್ಯ ಪರ ಜೆಡಿಎಸ್ ಕಾರ್ಯಕರ್ತರು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವಿವಿಧ ವಾರ್ಡ್ಗಳಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರು. ಈ ವೇಳೆ ಜೆಡಿಎಸ್ ನಗರಾಧ್ಯಕ್ಷ ರಾಜಣ್ಣ, ಉಪ ಮೇಯರ್ ಶೈಲೇಂದ್ರ, ಪಾಲಿಕೆ ಸದಸ್ಯ ಕೆಂಪಣ್ಣ, ಎಸ್.ಬಂಗಾರಪ್ಪ ಬ್ಲಾಕ್ ಅಧ್ಯಕ್ಷ ಸಂತೋಷ್, ಕೆ.ಆರ್. ಬ್ಲಾಕ್ ಅಧ್ಯಕ್ಷ ಎಂ.ಬಸವರಾಜು, ವರದರಾಜು, ಮಯೂರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement