ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಚಂದಗಾಲು ಗ್ರಾಮಸ್ಥರ ಪ್ರತಿಭಟನೆ

Srinivasa Murthy VN
Updated On : 9 Apr 2014, 1:11 am
ಕೆ.ಆರ್. ನಗರ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ವಿಳಂಬ ಆಗಮನ ಮತ್ತು ಗ್ರಾಮದ ಸ್ವಚ್ಛತೆಗೆ ಬಗ್ಗೆ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ, ಗ್ರಾಮಸ್ಥರು ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆಯಿತು.
ತಾಲೂಕಿನ ಚಂದಗಾಲು ಗ್ರಾಪಂ ಅಭಿವೃದ್ಧಿ ಅಧಿಕಾರಿ ಅಂಬಿಕಾ ನಿತ್ಯ ಪಂಚಾಯಿತಿಗೆ ವಿಳಂಬವಾಗಿ ಬರುವುದರ ಜತೆಗೆ, ಕಳೆದ ಎರಡು ದಿನಗಳ ಹಿಂದೆ ಜಾತ್ರೆಯ ವೇಳೆ ಗ್ರಾಮದ ತುಂಬಾ ಹರಡಿದ್ದ ಕಸವನ್ನು ಸ್ವಚ್ಛ ಮಾಡಿಸದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಕಚೇರಿಯ ಮುಂದೆ ಜಮಾಯಿಸಿದ ನೂರಾರು ಮಂದಿ ಗ್ರಾಮಸ್ಥರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಆಡಳಿತ ಮಂಡಳಿಯ ವಿರುದ್ಧ ದಿಕ್ಕಾರದ ಘೋಷಣೆ ಕೂಗಿದರಲ್ಲದೆ, ಕರ್ತವ್ಯ ಲೋಪ ಎಸಗುತ್ತಿರುವ ಅಭಿವೃದ್ಧಿ ಅಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.

Advertisement

Advertisement

ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿರುವ ವಿಷಯ ತಿಳಿದ ಅಭಿವೃದ್ಧಿ ಅಧಿಕಾರಿ ಅಂಬಿಕಾ ಪಿಎಸ್‌ಐ ಷಣ್ಮುಗಂ ಅವರೊಂದಿಗೆ ಪಂಚಾಯಿತಿಗೆ ಆಗಮಿಸಿದಾಗ ಅವರ ವಿರುದ್ಧ ತಿರುಗಿ ಬಿದ್ದ ಪ್ರಟಿಭಟನಾಕಾರರು ಅವರನ್ನು ತೀವ್ರವಾಗಿ ತರಾಟೆಗೆ ತೆಗೆಕೊಂಡರಲ್ಲದೆ, ಪೊಲೀಸರನ್ನು ಕರೆ ತಂದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.
ನಂತರ ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ಅಭಿವೃದ್ಧಿ ಅಧಿಕಾರಿ ಮಧ್ಯಾಹ್ನದ ವೇಳೆಗೆ ಮುಖ್ಯ ವೃತ್ತದಲ್ಲಿ ಹರಡಿದ್ದ ಕಸವನ್ನು ಸ್ವಚ್ಛಗೊಳಿಸಿದರು. 
ವರ್ಗಾವಣೆಗೆ ಆಗ್ರಹ: ನಿತ್ಯ ಕಚೇರಿಗೆ ವಿಳಂಬವಾಗಿ ಆಗಮಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಅಭಿವೃದ್ದಿ ಅಧಿಕಾರಿ ಅಂಬಿಕಾ ಅವರನ್ನು ಕೂಡಲೇ ಬೇರೆಡೆಗೆ ವರ್ಗಾವಣೆ ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement