ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಪೌರಾಣಿಕ ರಂಗಚಾವಡಿ ಉದ್ಘಾಟನೆ ನಾಳೆ: ನಾಗರಾಜ್

Srinivasa Murthy VN
Updated On : 11 Apr 2014, 12:22 pm

ಮೈಸೂರು: ಪೌರಾಣಿಕ ನಾಟಕಗಳನ್ನು ಉತ್ತೇಜಿಸುವ ಸಲುವಾಗಿ ಪೌರಾಣಿಕ ರಂಗಚಾವಡಿ ನೂತನ ವೇದಿಕೆಯು ಏ.12 ರಂದು ಅಸ್ತಿತ್ವಕ್ಕೆ ಬರಲಿದೆ. ಅಂದು ಸಂಜೆ 6ಕ್ಕೆ ಅಗ್ರಹಾರದ ಜೆಎಸ್‌ಎಸ್ ಆಸ್ಪತ್ರೆ ಆವರಣದಲ್ಲಿರುವ ಡಾ.ರಾಜೇಂದ್ರ ಭವನದಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಹೆಸರಾಂತ ಸುಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಉದ್ಘಾಟಿಸುವರು ಎಂದು ವೇದಿಕೆ ಅಧ್ಯಕ್ಷ ಸಂಗಾಪುರ ನಾಗರಾಜ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಬೆಳಗಲ್ಲು ವೀರಣ್ಣ ಅಧ್ಯಕ್ಷತೆ ವಹಿಸುವರು. ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಎಲ್.ಬಿ. ಶೇಖ್ ಮಾಸ್ತರ, ಹಿರಿಯ ರಂಗಸಂಗೀತ ತಜ್ಞ ಆರ್.ಪರಮಶಿವನ್, ರಂಗಾಯಣ ನಿರ್ದೇಶಕ ಎಚ್.ಜನಾರ್ದನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಚಂದ್ರಶೇಖರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲಾ ಮಠಪತಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು. ಹೊರ ರಾಜ್ಯಗಳಲ್ಲಿ ಪೌರಾಣಿಕ ನಾಟಕಗಳನ್ನು ಪ್ರದರ್ಶಿಸುವ ಬಗ್ಗೆ ಕಾರ್ಯಕ್ರಮಗಳನ್ನು ರೂಪಿಸುವುದು ಚಾವಡಿಯ ಬಹುಮುಖ್ಯ ಉದ್ದೇಶ ಎಂದು ತಿಳಿಸಿದರು. ಕಾರ್ಯದರ್ಶಿ ನಾಗರಾಜ್, ಸಹ ಕಾರ್ಯದರ್ಶಿ ಸುಬ್ಬಶೆಟ್ಟಿ ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷ ಎಂ. ಚಂದ್ರಶೇಖರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement