ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಚುನಾವಣೆ ಬಹಿಷ್ಕಾರ ಬೆದರಿಕೆ

Srinivasa Murthy VN
Updated On : 15 Apr 2014, 12:44 pm

ಕ.ಪ್ರ.ವಾರ್ತೆ ಪಿರಿಯಾಪಟ್ಟಣ ಏ. 14
ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ ತೋರುತ್ತಿದ್ದಾರೆ ಎಂದು ಆರೋಪಿಸಿ, ತಾಲೂಕಿನ ಉತ್ತೇನಹಳ್ಳಿ ಕಾಲೋನಿ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸುವುದಾಗಿ ಘೋಷಿಸಿ ಪ್ರತಿಭಟಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಂಚವಳ್ಳಿ ಗ್ರಾಪಂ ಸದಸ್ಯ ಆರ್. ವೆಂಕಟೇಶ್ ಮಾತನಾಡಿ, ಗ್ರಾಮಕ್ಕೆ ಅಗತ್ಯ ಮೂಲ ಸೌಕರ್ಯ ಒದಗಿಸಿಕೊಡುವಂತೆ ಗ್ರಾಮದ ವತಿಯಿಂದ 2008 ರ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಿದ್ದೆವು.  ಇದೇ ವೇಳೆ ಅಧಿಕಾರಿಗಳು ಹಾಗೂ ಕೆಲವು ರಾಜಕಾರಣಿಗಳು ಗ್ರಾಮಕ್ಕೆ ಭೇಟಿ ನೀಡಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವ ಭರವಸೆ ನೀಡಿದ ಬಳಿಕ, ಮತದಾನ ಮಾಡಿದ್ದೆವು. ಆದರೆ ಅಲ್ಲಿಂದ ಈವರೆಗೆ ಗ್ರಾಮದ ಮೂಲಭೂತ ಸೌಕರ್ಯದ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನಹರಿಸಲಿಲ್ಲ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋನಜನವಾಗಿಲ್ಲ.
ಈ ಬಾರಿಯ ಲೋಕಸಭಾ ಚುನಾವಣೆಯನ್ನು ನಾವು ಬಹಿಷ್ಕರಿಸಿದ್ದು, ಖುದ್ದು ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದಲ್ಲಿ ಮಾತ್ರ ಮತದಾನಕ್ಕೆ ಮುಂದಾಗುತ್ತೇವೆ ಎಂದು ತಿಳಿಸಿದರು.
ಉತ್ತೇನಹಳ್ಳಿ ಕಾಲೋನಿಯ ಗ್ರಾಮಸ್ಥರ ಚುನಾವಣಾ ಬಹಿಷ್ಕಾರಕ್ಕೆ ಬೆಂಬಲ ಸೂಚಿಸಿ, ತಾವು ಚುನಾವಣೆಯಲ್ಲಿ ಮತದಾನದಿಂದ ದೂರ ಸರಿಯುವುದಾಗಿ ಉತ್ತೇನಹಳ್ಳಿ ಗ್ರಾಮದ ಗ್ರಾಮಸ್ಥರು ಸಹ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಚ್.ಡಿ. ನಾಗರಾಜ್, ತಿಮ್ಮಯ್ಯ, ಮಲ್ಲೇಶ್, ಆನಂದ, ವೀರಭದ್ರ, ಗಣೇಶ, ಮಧು, ಶಿವಕುಮಾರ, ಬಸವ, ನವೀನ, ರವಿ ಇದ್ದರು.

ಡಿ.ಬಿ. ಕುಪ್ಪೆ ಬಳಿ ರು. 8 ಲಕ್ಷ ವಶ
ಎಚ್.ಡಿ. ಕೋಟೆ: ತಾಲೂಕಿನ ಡಿ.ಬಿ. ಕುಪ್ಪೆ ಗಡಿ ಭಾಗದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ರು. 8.55 ಲಕ್ಷ ನಗದನ್ನು ಚುನಾವಣಾ ಸ್ಥಿರ ಕಣ್ಗಾವಲು ಪಡೆ ವಶಪಡಿಸಿಕೊಂಡಿದೆ. ಕೇರಳ ಮೂಲದ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ತಂದಿದ್ದ 8.55 ಲಕ್ಷವನ್ನು ಗಸ್ತಿನಲ್ಲಿದ್ದ ಸಹಾಯಕ ಚುನಾವಣಾಧಿಕಾರಿ ಡಾ.ಕಾ. ರಾಮೇಶ್ವರಪ್ಪ ನೇತೃತ್ವದ ತಂಡ ವಶಪಡಿಸಿಕೊಂಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement