ಮಾಧ್ಯಮ ಕ್ಷೇತ್ರದಲ್ಲಿ ಅವಕಾಶಗಳು ವಿಫುಲ
ಕ.ಪ್ರ.ವಾರ್ತೆ ಮೈಸೂರು ಏ. 18
ಇಂದು ಶರವೇಗದಲ್ಲಿ ಬೆಳೆಯುತ್ತಿರುವ ಮಾಧ್ಯಮ ಕ್ಷೇತ್ರದಲ್ಲಿ ವಿಫುಲ ಉದ್ಯೋಗಾವಕಾಶಗಳಿವೆ ಹಾಗೂ ಪತ್ರಿಕೋದ್ಯಮ ಶಿಕ್ಷಣ ಪಡೆದವರನ್ನು ಕೆಲಸವೇ ಅರಸಿಕೊಂಡು ಬರುತ್ತದೆ ಎಂದು ಮೈಸೂರು ವಿವಿ ಪತ್ರಿಕೋದ್ಯಮ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಬಿ.ಪಿ. ಮಹೇಶ್ ಚಂದ್ರಗುರು ಹೇಳಿದರು.
ಮಹಾರಾಣಿ ಮಹಿಳಾ ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ನಡೆದ ಪತ್ರಿಕೋದ್ಯಮ ಶಿಕ್ಷಣ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕಾರಣ, ವ್ಯಾಪಾರ. ವಹಿವಾಟು, ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ ಕ್ರೀಡೆ, ಸಿನಿಮಾ, ಸಾರ್ವಜನಿಕ ಸಂಪರ್ಕ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಮಾಧ್ಯಮ ತಜ್ಞರ ಪಾತ್ರ ಹಾಗೂ ಅಗತ್ಯತೆಯ ಪ್ರಸ್ತುತ ಅನಿವಾರ್ಯತೆ ಇದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಅಂತಿಮ ಪತ್ರಿಕೋದ್ಯಮ ವಿದ್ಯಾರ್ಥಿನಿಯರು ವಿಭಾಗದ ಮುಖ್ಯಸ್ಥರ ಮಾರ್ಗದರ್ಶನದಲ್ಲಿ ಹೊರತಂದ ಮಹಾರಾಣೀಸ್ ಬುಲೆಟಿನ್ ಹಾಗೂ ಮಹಾರಾಣಿ ಮಂಥನ ಎಂಬ ದ್ವಿ-ಭಾಷಾ ಪತ್ರಿಕೆಯನ್ನು ಬಿಡುಗಡೆ ಮಾಡಿದರು.
ಪ್ರಾಂಶುಪಾಲ ಪ್ರೊ.ಎಂ. ಪುರುಷೋತ್ತಮ್ ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ. ಮಂಜಪ್ಪ ಇದ್ದಾರೆ. ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥೆ ಶ್ವೇತಾ ಎಂ.ಹನ್ಸ್ ಸ್ವಾಗತಿಸಿದರು. ಉಪನ್ಯಾಸಕ ಡಾ.ಗೋಪಾಲ ವಂದಿಸಿದರು. ವಿದ್ಯಾರ್ಥಿನಿಯರಾದ ಬಿಂದು ಹಾಗೂ ಪೃಥ್ವಿ ನಿರೂಪಿಸಿದರು.