ಇಳಿಜಾರಿಗೆ ಅಡ್ಡಲಾಗಿ ಉಳುಮೆ ಮಾಡಲು ರೈತರಿಗೆ ಕಿವಿಮಾತು
ಮೈಸೂರು: ಜಿಲ್ಲೆಯಲ್ಲಿ ಏ.25 ರವರೆಗೆ ಮೋಡ ಕವಿದ ವಾತಾರವಣವಿದ್ದು, ಚದುರಿದಂತೆ ಅಲ್ಲಲ್ಲಿ ತುಂತುರು ಮಳೆ ಬರುವ ಸಾಧ್ಯತೆ ಇದ್ದು, ಕೃಷಿ ಚಟುವಟಿಕೆಗಳ ಬಗ್ಗೆ ನಾಗನಹಳ್ಳಿ ಸಾವಯವ ಕೃಷಿ ಸಂಶೋಧನಾ ಕೇಂದ್ರ ಸಮಗ್ರ ಕೃಷಿ ಹವಾಮಾನ ವಿಭಾಗ ವತಿಯಿಂದ ಸಲಹೆ ನೀಡಿದ್ದಾರೆ.ಉಳುಮೆ ಹಂತದಲ್ಲಿ ಸಾಕಷ್ಟು ಮಳೆ ಬಂದಿರುವ ಪ್ರದೇಶಗಳಲ್ಲಿ ಜಮೀನನ್ನು ರೈತರು ಇಳಿಜಾರಿಗೆ ಅಡ್ಡಲಾಗಿ ಉಳುಮೆ ಮಾಡಿ, ಬಿತ್ತನೆಗೆ ಸೂಕ್ತ ರೀತಿಯಲ್ಲಿ ತಯಾರಿಸಿಕೊಳ್ಳುವುದು, ದ್ವಿದಳ ಧಾನ್ಯಗಳನ್ನು ಬಿತ್ತನೆ ಮಾಡುವಾಗ ರೈತರು ಬೀಜಗಳನ್ನು ರೈಜೋಬಿಯಂ ಸೂಕ್ಷ್ಮಾಣು ಜೀವಿಗಳಿಂದ ಉಪಚರಿಸಬೇಕು. (20 ಗ್ರಾಂ ಕೆಜಿ) ಮೋಡ ಕವಿದ ವಾತಾವರಣವಿರುವುದರಿಂದ ಮೆಣಸಿನಕಾಯಿ ಬೆಳೆಯಲ್ಲಿ ನುಸಿ ಮತ್ತು ಥಿಪ್ಸ್ ಕಂಡು ಬಂದಿದ್ದು, ಇದರ ಹತೋಟಿಗೆ ರೋಗರ್ 1.7 ಮಿ.ಲೀ. ಮತ್ತು ಡೈಕೋಪಾತ್ 2.5 ಮಿ.ಲೀ. ಔಷಧಿಯನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ಕಬ್ಬು ಬೆಳೆಯಲ್ಲಿ ಗೊಣ್ಣೆಹುಳು ರೋಗದ ಹತೋಟಿಗಾಗಿ 2 ಮಿ.ಲೀ. ಕ್ಲೋರೋಪೈರಿಫಾಸ್ ಔಷಧಿಯನ್ನು ಒಂದು ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ ಸಿಂಪಡಿಸಬೇಕು. ರೈತರು ಹೆಚ್ಚಿನ ಮಾಹಿತಿಗಾಗಿ ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಸಿ.ಗೋವಿಂದರಾಜು ಹಾಗೂ ಸಹ ಸಂಶೋಧಕ ಎನ್. ನರೇಂದ್ರಬಾಬು, ಮೊ. 8095227713, ದೂ. 2591267 ಸಂಪರ್ಕಿಸಬಹುದು.