ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಹಿಂದೂ ಧರ್ಮ ಗ್ರಂಥ ರಚನೆ ಆಗಬೇಕು: ಕೃಷ್ಣ

Mainashree
Updated On : 24 Apr 2014, 11:19 am

ಕ.ಪ್ರ.ವಾರ್ತೆ ್ಣ ಮೈಸೂರು ್ಣ ಏ. 24
ಅಧಿಕೃತವಾಗಿ ಹಿಂದೂ ಧರ್ಮ ಗ್ರಂಥ ರಚನೆ ಆಗಬೇಕಿದೆ ಎಂದು ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್. ಪೇಟೆ ಕೃಷ್ಣ ಹೇಳಿದರು.
ಮೈಸೂರಿನ ವಿಶ್ವವಿದ್ಯಾಲಯ ಸಂಜೆ ಕಾಲೇಜು ವತಿಯಿಂದ ಮಹಾರಾಜ ಕಾಲೇಜು ಜೂನಿಯರ್ ಬಿಎ ಹಾಲ್‌ನಲ್ಲಿ ಗುರುವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆಯಲ್ಲಿ ಡಾ.ಬಿ.ಪಿ. ಮಹೇಶ್ ಚಂದ್ರಗುರು ಮತ್ತು ಡಾ.ಸಿ.ಡಿ. ಪರಶುರಾಮ ಸಂಪಾದಿಸಿರುವ ಬಹುಜನ ಬಂಧು ಡಾ.ಬಿ.ಆರ್. ಅಂಬೇಡ್ಕರ್ ಕೃತಿಯನ್ನು ಅವರು ಬಿಡುಗಡೆಗೊಳಿಸಿ ಮಾತನಾಡಿದರು.
ಕ್ರಿಶ್ಚಿಯನ್, ಇಸ್ಲಾಂ ಸೇರಿದಂತೆ ವಿವಿಧ ಧರ್ಮಗಳು ಅಧಿಕೃತವಾದ ಧರ್ಮ ಗ್ರಂಥ ಹೊಂದಿವೆ. ಆದರೆ, ಹಿಂದೂ ಧರ್ಮ ಗ್ರಂಥ ಯಾವುದು ಎಂಬುದರ ಬಗ್ಗೆ ಸಾಕಷ್ಟು ಗೊಂದಲವಿದೆ. ಹೀಗಾಗಿ ಹಿಂದೂ ಧರ್ಮಕ್ಕಾಗಿ ಅಧಿಕೃತವಾದ ಗ್ರಂಥವೊಂದು ರಚನೆ ಆಗಬೇಕಿದೆ ಎಂದು ತಿಳಿಸಿದರು.
ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಸ್ವಚ್ಛ ರಾಜಕಾರಣ ನಡೆಯುತ್ತಿಲ್ಲ. ರಾಜಕಾರಣಿಗಳು, ಅಧಿಕಾರಿಗಳು ಹೀಗೆ ಯಾರಿಗೂ ಜವಾಬ್ದಾರಿ ಇಲ್ಲ. ಕೆಲವರು ಮಾತ್ರ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ. ವಿದ್ಯಾವಂತರಲ್ಲಿ ಜಾತಿ ಜಾಸ್ತಿ ಆಗಿದೆ ಎಂದು ಅವರು ವಿಷಾದಿಸಿದರು.
ವಿಶ್ವವಿದ್ಯಾಲಯ ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಸಿ.ಎಸ್. ರಾಮನಾರಾಯಣನ್ ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿವಿ ಎಂಬಿಎ ವಿಭಾಗದ ಪ್ರಾಧ್ಯಾಪಕ ಡಾ.ಡಿ.ಆನಂದ್, ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಡಾ.ಬಿ.ಪಿ. ಮಹೇಶ್ ಚಂದ್ರಗುರು, ಡಾ.ಪರಶುರಾಮ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement