ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ
ಮೈಸೂರು: ಎಚ್.ಡಿ.ಕೋಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ನಡೆಸಿರುವ ಅಕ್ರಮಗಳ ಬಗ್ಗೆ ಕೂಡಲೇ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ದೊಡ್ಡಸಿದ್ದು ಹಾದನೂರು ಒತ್ತಾಯಿಸಿದರು. ಪ.ಜಾತಿ ನಿರುದ್ಯೋಗಿ ಅಭ್ಯರ್ಥಿಗಳಿಗೆ ಲಘುವಾಹನ ಮತ್ತು ಭಾರಿ ವಾಹನ ಚಾಲನಾ ತರಬೇತಿಗೆ ಮಂಜೂರಾಗಿದ್ದ 5.45 ಲಕ್ಷ ಅನುದಾನ ಸರ್ಕಾರಕ್ಕೆ ವಾಪಸ್ ಆಗಿದೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಸ್ವಂತ ಉದ್ಯೋಗ ಹೊಂದಬೇಕಿದ್ದ ನೂರಾರು ಮಂದಿ ಇಂದು ಹೊರ ರಾಜ್ಯಕ್ಕೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ದೂರಿದರು.