ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನೀರಿನ ಸಮಸ್ಯೆ ಸಮರ್ಥ ನಿರ್ವಹಣೆಗೆ ಸಚಿವರ ಸೂಚನೆ

Mainashree
Updated On : 25 Apr 2014, 11:32 am

ಮೈಸೂರು: ಮುಂಗಾರು ದುರ್ಬಲವಾದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿಲ್ಲಾ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಎಲ್ಲಾ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಆಗಬಾರದು. ಸಾರ್ವಜನಿಕರಿಗೆ ಸಮರ್ಪಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಅಗತ್ಯಬಿದ್ದರೆ ಗ್ರಾಮೀಣ ಪ್ರದೇಶಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವಂತೆ ಸೂಚಿಸಿದರು.
ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗದಿರುವುದರಿಂದ ಜನ ಮತ್ತು ಜಾನುವಾರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಮಳೆ ಬಂದರೆ ಯಾವುದೆ ತೊಂದರೆ ಇರುವುದಿಲ್ಲ. ನೀರಿನ ಕೊರತೆ ಇರುವುದರಿಂದ ಸಾರ್ವಜನಿಕರಿಗೆ ನೀರಿನ ಮಿತ ಬಳಕೆಯ ಬಗ್ಗೆ ಅರಿವು ಮೂಡಿಸಬೇಕು. ನೀರಿನ ಕೊರತೆಯಿಂದ ಅಸಮಾಧಾನಗೊಂಡ ಗ್ರಾಮಸ್ಥರನ್ನು ಅಧಿಕಾರಿಗಳು ಸಂತೈಸಬೇಕು. ಗ್ರಾಪಂಗಳಲ್ಲಿ ಹೆಚ್ಚುವರಿ ಬೋರ್‌ವೆಲ್ ಮೋಟರ್‌ಗಳನ್ನು ಹೊಂದಿರುವುದಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.
70 ಹೊಸ ಬೋರ್‌ವೆಲ್: ಜಿಪಂ ಸಿಇಒ ಪಿ.ಎ.ಗೋಪಾಲ್ ಸಭೆಗೆ ಮಾಹಿತಿ ನೀಡುತ್ತ, ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹಲವು ತಾಲೂಕುಗಳಲ್ಲಿ 70 ಬೋರ್‌ವೆಲ್ ತೆಗೆಸಲಾಗಿದೆ. ಕೆಲವರು ನೀತಿ ಸಂಹಿತೆ ಕಾರಣಕ್ಕೆ ದೂರು ನೀಡಿದಾಗ ಸೆಕ್ಟರ್ ಮ್ಯಾಜಿಸ್ಟ್ರೇಟರ್‌ಗಳು ಬೋರ್‌ವೆಲ್ ತೆಗೆಯುವುದನ್ನು ತಡೆದು ಪರಿಕರಗಳನ್ನು ವಶಪಡಿಸಿಕೊಂಡಿದ್ದರು. ಬಳಿಕ ಜಿಲ್ಲಾಧಿಕಾರಿ ಸಿ.ಶಿಖಾ ಅವರು ಮಾಹಿತಿ ನೀಡಿ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು ಪೂರೈಕೆಗೆ ನೀತಿ ಸಂಹಿತೆ ಅಡ್ಡಿ ಆಗುವುದಿಲ್ಲ ಎಂದು ಹೇಳಿದ ಮೇಲೆ ಚುನಾವಣಾ ಅಧಿಕಾರಿಗಳು ಹಿಂದಿರುಗಿದ ಘಟನೆ ಇದೆ ಎಂದು ವಿವರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement