ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಎಲ್ಲರಿಗೂ ಮೀಸಲು ನೀಡಿದ ಸಂವಿಧಾನ

Mainashree
Updated On : 27 Apr 2014, 11:21 am

ಕ.ಪ್ರ.ವಾರ್ತೆ  ಮೈಸೂರು  ಏ. 27
ಸಂವಿಧಾನದಿಂದ ಕೇವಲ ದಲಿತರು ಮಾತ್ರವಲ್ಲದೆ ಎಲ್ಲಾ ಜಾತಿ ಜನಾಂಗದವರೂ ಮೀಸಲಾತಿ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಪಿ. ಮಹೇಶ್‌ಚಂದ್ರ ಗುರು ತಿಳಿಸಿದರು.
ವಿಜಯನಗರದ ಕಾವೇರಿ ಗ್ರಾಮೀಣ ಬ್ಯಾಂಕ್ ಆವರಣದಲ್ಲಿ ಕಾವೇರಿ ಗ್ರಾಮೀಣ ಬ್ಯಾಂಕ್ ಪ.ಜಾತಿ, ಪ.ವರ್ಗದ ನೌಕರರ ಮತ್ತು ಅಧಿಕಾರಿಗಳ ಸಂಘ ಏರ್ಪಡಿಸಿದ್ದ ಡಾ.ಬಿ.ಅರ್. ಅಂಬೇಡ್ಕರ್ ಅವರ 123ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿ ಕಂಡ ಸಮಾಜ ಸರ್ವೊದಯದ ಕನಸನ್ನು ಅಂಬೇಡ್ಕರ್ ಸಾಕಾರಗೊಳಿಸಿದರು. ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬುದನ್ನು ತೋರಿಸಿಕೊಟ್ಟ ಅಂಬೇಡ್ಕರ್ ಮೇಲ್ವರ್ಗದವರನ್ನು ಎಂದಿಗೂ ವಿರೋಧಿಸಲಿಲ್ಲ. ಯಾವ ನಾಯಕರು ಅಥವಾ ಸರ್ಕಾರವೇ ಅಧಿಕಾರಕ್ಕೆ ಬಂದರೂ ಸಂವಿಧಾನ ಮೀರಿ ಆಡಳಿತ ನಡೆಸುವುದು ಸಾಧ್ಯವಿಲ್ಲ. ಸಂವಿಧಾನ ಎಲ್ಲಾ ಕಾಲಕ್ಕೂ ಗಟ್ಟಿಯಗಿ ನಿಲ್ಲುತ್ತದೆ. ಗುಲಾಮಗಿರಿ ಕೊನೆಗಾಣಿಸಲು ಹಾಗೂ ಸಾರ್ವಭೌಮತ್ವ ಎತ್ತಿಹಿಡಿಯಲು ಸಂವಿಧಾನ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದರು.
ಬ್ಯಾಂಕ್ ಅಧ್ಯಕ್ಷ ಡಿ.ಸೋಮಶೇಖರ ಶಾಸ್ತ್ರಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಅನಾವರಣಗೊಳಿಸಿದರು. ನೌಕರರ ಸಂಘದ ಅಧ್ಯಕ್ಷ ಪ್ರದೀಪ್, ಕಾರ್ಯಾಧ್ಯಕ್ಷ ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಸಹ ಕಾರ್ಯದರ್ಶಿ ಎಚ್.ಸಿ. ಮಹದೇವು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement