ರಜಾ ದಿನದಲ್ಲಿ ಮೃಗಾಲಯಕ್ಕೆ ಪ್ರವೇಶ
ಮೈಸೂರು: ಶಾಲಾ- ಕಾಲೇಜುಗಳಿಗೆ ಬೇಸಿಗೆ ರಜೆ ಇರುವುದರಿಂದ ಮಕ್ಕಳು ಮತ್ತು ಪ್ರವಾಸಿಗರಿಗೆ ಅನುಕೂಲವಾಗಲೆಂದು ರಜಾ ದಿನವಾದ ಏ.29 ರ ಮಂಗಳವಾರದಂದು ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಕಾರಂಜಿಕೆರೆ ಪ್ರಕೃತಿ ಉದ್ಯಾನವನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆದಿರಲಾಗುವುದು ಎಂದು ಮೃಗಾಯಲದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ರವಿ ತಿಳಿಸಿದ್ದಾರೆ.