ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಅರಣ್ಯ ಹಕ್ಕು ಕಾಯ್ದೆ ಜಾರಿಗೆ ಆಗ್ರಹ

Mainashree
Updated On : 29 Apr 2014, 12:06 pm

ಕ.ಪ್ರ.ವಾರ್ತೆ  ಮೈಸೂರು  ಏ. 28
ರಾಜ್ಯ ಸರ್ಕಾರ ಅರಣ್ಯ ಹಕ್ಕು ಕಾಯ್ದೆಯನ್ನು ತಕ್ಷಣ ಜಾರಿಗೊಳಿಸುವಂತೆ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತು ಆಗ್ರಹಿಸಿದೆ.
ನಗರದ ಚಾಮರಾಜ ಜೋಡಿ ರಸ್ತೆಯ ಸಹಕಾರ ಭವನದ ಸಭಾಂಗಣದಲ್ಲಿ ಸೋಮವಾರ ನಡೆದ ಪರಿಷತ್ತಿನ ಜಿಲ್ಲಾ ಘಟಕದ ಮಾಸಿಕ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು.
ರಾಜ್ಯ ಸರ್ಕಾರವು ಕೂಡಲೇ ಅರಣ್ಯ ಹಕ್ಕು ಕಾಯ್ದೆ ಜಾರಿಗೊಳಿಸಬೇಕು. ಆದಿವಾಸಿ ಮಕ್ಕಳಿಗೆ ಅಗತ್ಯವಿರುವ ಪೌಷ್ಟಿಕ ಆಹಾರ ಪೂರೈಸಬೇಕು. ಆದಿವಾಸಿಗಳಿಗೆ ನೀಡುವ ಶೇ.20ರಷ್ಟು ಮೀಸಲಾತಿ ದುರುಪಯೋಗ ಆಗಬಾರದು. ಸಂಪೂರ್ಣ ಮೀಸಲಾತಿಯನ್ನು ಆದಿವಾಸಿಗಳಿಗೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಆಶ್ರಮ ಶಾಲೆಯ ಮಕ್ಕಳಿಗೆ ತಡವಾಗಿ ಸಮವಸ್ತ್ರ ಮತ್ತು ಪಠ್ಯಪುಸ್ತಕ ನೀಡಲಾಗುತ್ತಿದೆ. ಇತರ ಸರ್ಕಾರಿ ಶಾಲೆಗಳಲ್ಲಿ ನೀಡುವಂತೆ ಶಾಲೆ ಆರಂಭದ ದಿನದಿಂದಲೆ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಿಸಲು ಕ್ರಮ ಕೈಗೊಳ್ಳಬೇಕು. ತಪ್ಪಿದರೆ ಶಾಲೆಗೆ ಬೀಗಹಾಕಿ ಪ್ರತಿಭಟಿಸಬೇಕಾಗುತ್ತದೆ. ಅಲ್ಲದೆ ಅಧಿಕಾರಿಗಳು ಹಾಡಿಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಮಟ್ಟ ಮತ್ತು ಶಾಲೆಯಲ್ಲಿನ ಶಿಕ್ಷಣದ ಗುಣಮಟ್ಟ ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ಪರಿಷತ್ತಿನ ರಾಜ್ಯಾಧ್ಯಕ್ಷ ಎಂ. ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಕಾವೇರ, ಜಿಲ್ಲಾಧ್ಯಕ್ಷ ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಜಿ.ಸ್ವಾಮಿ, ಸಂಘಟನಾ ಕಾರ್ಯದರ್ಶಿ ಕುಮಾರ್, ಪಿರಿಯಾಪಟ್ಟಣ ತಾಲೂಕು ಸಂಘಟನಾ ಕಾರ್ಯದರ್ಶಿ ಮಧುಕುಮಾರ್, ಎಚ್.ಡಿ.ಕೋಟೆ ತಾಲೂಕು ಸಂಘಟನಾ ಸಂಚಾಲಕ ಶಿವಯ್ಯ, ನಂಜನಗೂಡು ತಾಲೂಕು ಸಂಘಟನಾ ಕಾರ್ಯದರ್ಶಿ ಶಿವಣ್ಣ, ಎಲ್ಲಾ ತಾಲೂಕುಗಳ ಅಧ್ಯಕ್ಷರು ಸಭೆಯಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement