ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕ್ರಿಯಾ ಯೋಜನೆ ತಯಾರಿಸಲು ಸೂಚನೆ

Mainashree
Updated On : 30 Apr 2014, 11:49 am

ಮೈಸೂರು: ಪ್ರಸಕ್ತ ಸಾಲಿನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸಲು ಮೇ ತಿಂಗಳ ಒಳಗೆ ಕ್ರಿಯಾ ಯೋಜನೆಯನ್ನು ತ್ವರಿತವಾಗಿ ತಯಾರಿಸಬೇಕು ಎಂದು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ ತಿಳಿಸಿದರು.
ಬುಧವಾರ ನಡೆದ ವರುಣ ಕ್ಷೇತ್ರದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಬೋರ್‌ವೆಲ್‌ಗಳು ಕೆಟ್ಟು ಹೋದ ಕೂಡಲೆ ದುರಸ್ತಿ ಮಾಡಿಸಬೇಕು. ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿಗೆ ವಿದ್ಯುತ್ ಪೂರೈಸಬೇಕು. ಆದ್ಯತೆಯ ಮೇಲೆ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಿದ್ದರಾಮನಹುಂಡಿ ಗ್ರಾಮ ಸೇರಿದಂತೆ ಕ್ಷೇತ್ರದ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಅಧಿಕಾರಿಗಳು ಮುಂದಾಗಬೇಕು. ಸಮಸ್ಯೆಗಳ ದೂರು ಕೇಳಿಬಂದ ಕೂಡಲೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರನ್ನು ಅನಗತ್ಯವಾಗಿ ಕಚೇರಿಗೆ ಅಲೆಸಬಾರದು ಎಂದರು.
ಇಒ ಅರುಳ್‌ಕುಮಾರ್, ತಹಸೀಲ್ದಾರ್ ಜಗದೀಶ್, ಶಿವಸ್ವಾಮಿ, ನಾಗರಾಜ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement