ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಮುಕ್ತ ವಿವಿ: ಲೈಂಗಿಕ ಕಿರುಕುಳ

Mainashree
Updated On : 30 Apr 2014, 11:16 am

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ಹಿಂದಿ ವಿಭಾಗದ ಪ್ರಾಧ್ಯಾಪಕರೊಬ್ಬರ ಮೇಲೆ ಲೈಂಗಿಕ ಕಿರುಕುಳ ಆರೋಪ ಬಂದಿದೆ. ಮಹಿಳೆಯರ ವಿರುದ್ಧ ಲೈಂಗಿಕ ಕಿರುಕುಳ ದೂರು ನಿವಾರಣಾ ಸಮಿತಿಯು ಲಿಖಿತ ದೂರು ಪಡೆದು ವಿಚಾರಣೆ ಆರಂಭಿಸಿದೆ. ಮುಕ್ತ ವಿವಿಯ ಆಂಗ್ಲಭಾಷಾ ವಿಭಾಗದ ಸಹಾಯಕ ಪ್ರಾಧ್ಯಾಪಕಿಯೊಬ್ಬರು ಲೈಂಗಿಕ ಕಿರುಕುಳದ ದೂರು ನೀಡಿದ್ದು, ಈ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಲೈಂಗಿಕ ಕಿರುಕುಳ ನೀಡುತ್ತಿರುವ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಅತಿರೇಕದ ವರ್ತನೆ ಪ್ರದರ್ಶಿಸುತ್ತಾರೆ. ಹಲವು ಬಾರಿ ಮೈಮುಟ್ಟಿ ಮಾತನಾಡಿಸುವುದು, ನನ್ನ ಕೆಲಸದಲ್ಲಿ ಮೂಗು ತೂರಿಸುವುದು, ನಿರಂತರವಾಗಿ ನನ್ನನ್ನು ಹಿಂಬಾಲಿಸುತ್ತಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರೆ, ಇತರೆ ಸಹೋದ್ಯೋಗಿಗಳ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿರುಕುಳಕ್ಕೆ ಒಳಗಾದ ಸಹಾಯಕ ಪ್ರಾಧ್ಯಾಪಕಿ ದೂರು ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement