ಟಿ. ನರಸೀಪುರ: ಪಟ್ಟಣದ ಗುರುಭವನದಲ್ಲಿ ಆ. 4ರ ಬೆಳಗ್ಗೆ 9.30ಕ್ಕೆ ಅಂಗವಿಕಲ ಮಕ್ಕಳ ವೈದ್ಯ ತಪಾಸಣೆ ಮತ್ತು ಮೌಲ್ಯಾಂಕನ ಶಿಬಿರ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ ಹೇಳಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪದನಿಮಿತ್ತ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ 2014-15ನೇ ಸಾಲಿಗೆ ಹಮ್ಮಿಕೊಂಡಿರುವ ಶಿಬಿರದಲ್ಲಿ 1ನೇ ತರಗತಿಯಿಂದ 8ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ಮಕ್ಕಳಿಗೆ ವೈದ್ಯ ತಪಾಸಣೆ ಹಾಗೂ ಮೌಲ್ಯಾಂಕನ ಮಾಡಲಾಗುವುದು. ಮುಖ್ಯ ಶಿಕ್ಷಕರು ಕಡ್ಡಾಯವಾಗಿ ಅಂಗವಿಕಲ ಮಕ್ಕಳನ್ನು ಪೋಷಕರೊಡನೆ ಕರೆತರುವಂತೆ ಕೋರಿದ್ದಾರೆ.