ಎನ್‌ಐಇ ಅಧ್ಯಕ್ಷರಾಗಿ ಶ್ರೀಪಾದರಾವ್ ಆಯ್ಕೆ
ಮೈಸೂರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ (ಎನ್‌ಐಇ) ಅಧ್ಯಕ್ಷರಾಗಿ ಎಂ. ಶ್ರೀಪಾದರಾವ್ ಹಾಗೂ ಉಪಾಧ್ಯಕ್ಷರಾಗಿ ಡಾ. ಸಿಕೆಎನ್ ರಾಜಾ ಆಯ್ಕೆಯಾಗಿದ್ದಾರೆ. ಶ್ರೀಪಾದರಾವ್ ಅವರು ಮುಂಚೂಣಿಯಲ್ಲಿರುವ ಶಿಕ್ಷಣ ತಜ್ಞರು. ನಾಗರಿಕ ಕ್ಷೇಮಾಭಿವೃದ್ಧಿ ಸಮಿತಿ ಸಂಸ್ಥಾಪಕ ಅಧ್ಯಕ್ಷರಾಗಿ, ಗ್ರಾಜ್ಯುಯೇಟ್ ಕೋ- ಆಪರೇಟ್ ಬ್ಯಾಂಕ್‌ನ ಅಧ್ಯಕ್ಷರಾಗಿ, ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ನೀತಿ ಸಮಿತಿಯ ಸದಸ್ಯರಾಗಿ, ಜಿಲ್ಲಾ ಅಥ್ಲೆಟಿಕ್ಸ್ ಸಂಘದ ಉಪಾಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಡಾ. ಸಿಕೆಎನ್ ರಾಜಾ ಅವರು ಭಾರತ ಸಂವಿಧಾನ ಪ್ರಾಧಿಕಾರ, ಮೈಸೂರು ವಿವಿಯ ಕಾನೂನು ವಿಭಾಗದ ಮುಖ್ಯಸ್ಥರಾಗಿದ್ದರು.