ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಪೋಲಿಯೊ ನಿಯಂತ್ರಣ ಸೇವೆ ಸ್ಮರಣೀಯ: ಬಾಲಸುಬ್ರಹ್ಮಣ್ಯಂ

Rashmi Kasaragodu
Updated On : 2 Feb 2014, 12:56 pm

ಮೈಸೂರು: ಸಮಾಜದಲ್ಲಿನ ಪೋಲಿಯೊ ನಿರ್ಮೂಲನೆಗೆ ಶ್ರಮಿಸಿದ ಕ್ಷೇತ್ರ ಕಾರ್ಯಕರ್ತರ ಸೇವೆ ಸ್ಮರಣೀಯ ಎಂದು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥಾಪಕ ಡಾ. ಆರ್. ಬಾಲಸುಬ್ರಹ್ಮಣ್ಯಂ ಹೇಳಿದರು. ವಿಕಲ ವಿಕಾಸ ಸಂಸ್ಥೆಯು ಅರಮನೆ ಉತ್ತರ ದ್ವಾರದಲ್ಲಿರುವ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಪೋಲಿಯೊ ಮುಕ್ತ ಭಾರತಕ್ಕೆ ವಂದನೆ, ಅಭಿವಂದನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 2011 ರಲ್ಲಿ ಭಾರತ ಪೋಲಿಯೋ ಮುಕ್ತ ದೇಶವೆಂದು ಘೋಷಿಸಲಾಯಿತು ಎಂದರು.
ಕೆ.ಆರ್. ಆಸ್ಪತ್ರೆ ಅಧೀಕ್ಷಕ ಡಾ.ಬಿ.ಜಿ. ಸಾಗರ್, ಪೋಲಿಯೊ ಮುಕ್ತವಾಗಿದೆಯೆಂದು ಉದಾಸೀನತೆ ತೋರದೆ ಅದರ ವಂಶವಾಹಿನಿ ಬಗ್ಗೆ ಎಚ್ಚರ ವಹಿಸಬೇಕು. ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಸಮರ್ಪಕವಾದರೆ ಇಂತಹ ಪಿಡುಗು ನಿಯಂತ್ರಿಸಬಹುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement