ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕೋರ್ಟ್ ಆವರಣದಲ್ಲಿ 2 ಕಿಯೋಸ್ಕ್ ಆರಂಭ

Rashmi Kasaragodu
Updated On : 3 Feb 2014, 12:51 pm

ಮೈಸೂರು: ನಗರದ ನ್ಯಾಯಾಲಯ ಆವರಣದಲ್ಲಿ ಸ್ಥಾಪಿಸಲಾಗಿರುವ ಎರಡು ಕಿಯೋಸ್ಕ್ಗಳನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಹಾಗೂ ಮೈಸೂರು ಜಿಲ್ಲಾ ಆಡಳಿತ ನ್ಯಾಯಾಧೀಶರಾದ ಹೈಕೋರ್ಟ್ ನ್ಯಾಯಾಧೀಶ ಎನ್.ಕೆ. ಪಾಟೀಲ್ ಅವರು ಭಾನುವಾರ ಉದ್ಘಾಟಿಸಿದರು.
ಜಿಲ್ಲಾ ನ್ಯಾಯಾಂಗ, ಜಿಲ್ಲಾ ವಕೀಲರ ಸಂಘ ಹಾಗೂ ಲೋಕೋಪಯೋಗಿ ಇಲಾಖೆಯು ಸಂಯುಕ್ತವಾಗಿ ಈ ಕಾರ್ಯಕ್ರಮ ಆಯೋಜಿಸಿತ್ತು.
ಕಿಯೋಸ್ಕ್ನಲ್ಲಿ ಎಟಿಎಂ ಕೇಂದ್ರಗಳಲ್ಲಿರುವಂತೆ ಟಚ್ ಸ್ಕ್ರೀನ್ ಕಂಪ್ಯೂಟರ್ ಅಳವಡಿಸಲಾಗಿದೆ. ಇದರಲ್ಲಿ ಮೈಸೂರು ನ್ಯಾಯಾಲಯದಲ್ಲಿ ದಾಖಲಾಗಿರುವ, ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ಸಂಪೂರ್ಣ ಮಾಹಿತಿ ಲಭ್ಯವಿದೆ. ದೂರುಗಳಿಗೆ ಸಂಬಂಧಪಟ್ಟವರು ಪ್ರಕರಣದ ಸಂಖ್ಯೆ ನಮೂದಿಸಿದರೆ ವಿವರವಾದ ಮಾಹಿತಿ ಸ್ಕ್ರೀನ್ ಮೇಲೆ ನೋಡಬಹುದಾದ ವ್ಯವಸ್ಥೆ ಮಾಡಲಾಗಿದೆ. ಆರಂಭಿಕವಾಗಿ ಈ ಸೇವೆಯು ಆಂಗ್ಲಭಾಷೆಯಲ್ಲಿ ಲಭ್ಯವಿದೆ. ಜನರಿಂದ ವ್ಯಕ್ತವಾಗುವ ಪ್ರತಿಕ್ರಿಯೆ ಬಳಿಕ ಕನ್ನಡ ಭಾಷೆ ಅಳವಡಿಸಲಾಗುವುದು. ಕಿಯೋಸ್ಕ್ನ ಸೇವೆಯು ಸಂಪೂರ್ಣ ಉಚಿತವಾಗಿರುತ್ತದೆ. ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶೆ ಕೆ.ಎಸ್. ಮುದಗಲ್, ಮೈಸೂರು ವಕೀಲರ ಸಂಘದ ಅಧ್ಯಕ್ಷ ಸಿ. ಬಸವರಾಜು, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಕೃಷ್ಣಮೂರ್ತಿ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement