ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಬಸ್- ಕಾರು ಡಿಕ್ಕಿ, ಇಬ್ಬರ ಸಾವು

Rashmi Kasaragodu
Updated On : 3 Feb 2014, 12:54 pm

ಕೆ.ಆರ್. ನಗರ: ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೆ ಮೃತಪಟ್ಟು, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಸಿದ್ದನಕೊಪ್ಪಲು ಗೇಟ್ ಬಳಿ ಭಾನುವಾರ ನಡೆದಿದೆ. ಕೆ.ಆರ್. ನಗರದಿಂದ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ಬಸ್ಸೊಂದು ನಾಡಪ್ಪನಹಳ್ಳಿಯಿಂದ- ಕೆ.ಆರ್. ನಗರಕ್ಕೆ ಆಗಮಿಸುತ್ತಿದ್ದ ಆಲ್ಟೊ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಹಾರಂಗಿ ನೀರು ಬಳಕೆದಾರರ ಸಹಕಾರ ಸಂಘದ ಉಪಾಧ್ಯಕ್ಷ ನಾಡಪ್ಪನಹಳ್ಳಿ ಎನ್.ಪಿ. ಮಹದೇವಪ್ಪ ಮತ್ತು ನಾಡಪ್ಪನಹಳ್ಳಿ ಚಿತ್ರಶೇಖರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿಯಲ್ಲಿ ಕುಳಿತಿದ್ದ ಶಿವಮ್ಮ, ಮಹಾದೇವಿ ಮತ್ತು ರಾಜು ಅವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಳೆ ವಿದ್ಯುತ್ ಪೂರೈಕೆ ವ್ಯತ್ಯಯ
ಮೈಸೂರು: ನಗರದ 66/11 ಕೆವಿ ದಕ್ಷಿಣ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ 11 ಕೆವಿ ಕೆಎಂಪಿ ಮತ್ತು ಎಲ್ಎಫ್-3 ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳುವುದರಿಂದ ಫೆ.4ರ ಬೆಳಗ್ಗೆ 10 ರಿಂದ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಕೋರಿದ್ದಾರೆ. ಪ್ರದೇಶಗಳು- ಅಶೋಕಪುರಂ, ಕೃಷ್ಣಮೂರ್ತಿಪುರಂ, ಅಂಚೆ ಕಚೇರಿ, ಮಾನಂದವಾಡಿ ರಸ್ತೆ, ಎನ್ಐಇ ಕಾಲೇಜು, ಅರಣ್ಯ ಭವನ ಕಚೇರಿ, ಸಾರ್ವಜನಿಕ ಹಾಸ್ಟೆಲ್, ಸಿಲ್ಕ್ ಫ್ಯಾಕ್ಟರಿ, ಅಶೋಕ ವೃತ್ತ, ರತ್ನ ಟಾಕೀಸ್, ಜೈನ ಭವನ, ರಾಮಸ್ವಾಮಿ ವೃತ್ತ, ಶಂಕರ ಮಠ, ಚಾಮರಾಜಪುರಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ತಹಸೀಲ್ದಾರ್ ಅಮಾನತಿಗೆ ಆಗ್ರಹ
ಮೈಸೂರು: ಜೀತದಾಳು ಶಿವಕುಮಾರ್ ಸಾವಿಗೀಡಾದ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ಹೂಡಿ, ಹೋರಾಟ ಹತ್ತಿಕ್ಕಲು ಪ್ರಯತ್ನಿಸಿರುವ ತಹಸೀಲ್ದಾರ್ ಅರುಣ್ಪ್ರಭ ಅವರನ್ನು ಅಮಾನತುಗೊಳಿಸುವಂತೆ ದಸಂಸ ಆಗ್ರಹಿಸಿದೆ. ಒಂದು ಕಡೆ ದಲಿತರ ಹೋರಾಟ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದರೆ, ಮತ್ತೊಂದು ಕಡೆ ಜಿಲ್ಲೆಯವರೇ ಆದ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್, ಸಚಿವ ಡಾ.ಎಚ್.ಸಿ. ಮಹದೇವಪ್ಪ ಗಂಭೀರವಾಗಿ ಪರಿಗಣಿಸದಿರುವುದು ವಿಷಾದನೀಯ. ಕಾಂಗ್ರೆಸ್ ದಲಿತರ ಮತಗಳಿಂದ ಅಧಿಕಾರಕ್ಕೆ ಬಂದು ಈಗ ದಲಿತರ ಹಿತ ಕಡೆಗಣಿಸುತ್ತಿದೆ. ತಹಸೀಲ್ದಾರ್ ಅಮಾನತಿಗೆ ಆಗ್ರಹಿಸಿ ಕಳೆದೊಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಯಾವೊಬ್ಬ ಜನಪ್ರತಿನಿಧಿಯೂ ಸ್ಪಂದಿಸಿಲ್ಲ ಎಂದು ಜಿಲ್ಲಾ ಸಂಚಾಲಕ ನಿಂಗರಾಜ್ ಮಲ್ಲಾಡಿ, ಪೇಪರ್ ರಾಜಣ್ಣ, ಎಚ್.ಪಿ. ದಿವಾಕರ್, ವೈ. ಕುಮಾರ್ ತಿಳಿಸಿದ್ದಾರೆ.
ನಾಳೆ ಅಭಿನಂದನಾ ಸಮಾರಂಭ
ಮೈಸೂರು: ಇಂಚರ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಫೆ.4ರ ಸಂಜೆ 5ಕ್ಕೆ ಜೆಎಲ್ಬಿ ರಸ್ತೆಯ ಎಂಜಿನಿಯರುಗಳ ಸಂಸ್ಥೆಯಲ್ಲಿ ಪ್ರತಿಷ್ಠಾನದ ಉದ್ಘಾಟನೆ ಹಾಗೂ ಅಭಿನಂದನಾ ಸಮಾರಂಭ ಏರ್ಪಡಿಸಿದ್ದು, ಹಿರಿಯ ಸಾಹಿತಿ ಡಾ.ಸಿಪಿಕೆ ಉದ್ಘಾಟಿಸುವರು.
ಪದಾಧಿಕಾರಿಗಳ ಸಭೆ
ಮೈಸೂರು: ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ಸಭೆಯನ್ನು ಫೆ. 4ರ ಮಧ್ಯಾಹ್ನ 3ಕ್ಕೆ ನಗರದ ಪಕ್ಷದ ಕಚೇರಿಯಲ್ಲಿ ಏರ್ಪಡಿಸಿದ್ದು, ಬೋಗಾದಿ ನಂದೀಶ್, ಮಹದೇವ ಭಾಗವಹಿಸುವರು.
ಕ್ಯಾನ್ಸರ್ ದಿನ
ಮೈಸೂರು: ಹೆಬ್ಬಾಳಿನಲ್ಲಿರುವ ಭಾರತ್ ಆಸ್ಪತ್ರೆ ಮತ್ತು ಗಂಥಿ ಸಂಸ್ಥೆಯಿಂದ ಫೆ.5ರ ಮಧ್ಯಾಹ್ನ 3.30ಕ್ಕೆ ಈಜಿಡೇ ಮತ್ತು ಮಾಲ್ ಆಫ್ ಮೈಸೂರ್ನಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಏರ್ಪಡಿಸಿದ್ದು, ಕಾಲೇಜು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement