ನಾಳೆ ಕೆಲವೆಡೆ ವಿದ್ಯುತ್ ವ್ಯತ್ಯಯ
ನಂಜನಗೂಡು: ತಾಲೂಕಿನ ಹುಲ್ಲಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಫೆ.5ರ ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ. ಪ್ರದೇಶಗಳು- ಹುಲ್ಲಹಳ್ಳಿ ಟೌನ್, ರಾಮಾಪುರ, ಶಿರಮಳ್ಳಿ, ಹೆಗ್ಗಡಹಳ್ಳಿ, ಕುರಿಹುಂಡಿ, ಚಂದ್ರವಾಡಿ, ಕಡಜಟ್ಟಿ, ಹುರಾ ಫೀಡರ್ಗಳು.