ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಧರ್ಮಸ್ಥಳ ಯೋಜನೆ ಜನರಿಗೆ ಅನುಕೂಲ

Vishwanath S
Updated On : 5 Feb 2014, 12:05 pm

ಕ.ಪ್ರ.ವಾರ್ತೆ ,  ಹುಣಸೂರು ,  ಫೆ. 4
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯು ಗ್ರಾಮೀಣ ಭಾಗದ ಜನರಿಗೆ ಹಾಗೂ ರೈತರಿಗೆ ಆರ್ಥಿಕ, ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು ಶಾಸಕ ಎಚ್.ಪಿ. ಮಂಜುನಾಥ್ ಸಂತಸ ವ್ಯಕ್ತಪಡಿಸಿದರು.
ಪಟ್ಟಣದ ಸೇತುವೆಯ ವಾಸವಿ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದೊಂದು ವರ್ಷದಿಂದ ಈ ನಿಟ್ಟಿನಲ್ಲಿ ತಾಲೂಕು ಆಡಳಿತ ಯೋಜನೆಯೊಂದಿಗೆ ಕೈಗೂಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದೆ. ಉತ್ಸವದ ದಿನ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ತಮ್ಮ ಮಾತೃಶ್ರೀಯವರ ಹೆಸರಿನಲ್ಲಿ ಅನ್ನಸಂತರ್ಪಣೆ ನಡೆಸುವುದಾಗಿ ಪ್ರಕಟಿಸಿದರು.
ಮಾ.3 ರಂದು ಕೃಷಿ ಉತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿ ತಾಲೂಕು ಮಟ್ಟದ ಕೃಷಿ ಉತ್ಸವವನ್ನು ಮಾ.3 ರಂದು ಆಯೋಜಿಸಲು ಸರ್ವಾನುಮತದಿಂದ ತೀರ್ಮಾನಿಸಲಾಯಿತು.
ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ತಾಲೂಕು ಯೋಜನಾಧಿಕಾರಿ ಎಂ.ರಾಮು, ತಾಪಂ ಅಧ್ಯಕ್ಷೆ ದೇವಕಿ ತಿಮ್ಮನಾಯ್ಕ, ಪುರಸಭೆ ಸದಸ್ಯರಾದ ಸುನೀತಾ ಜಯರಾಮೇಗೌಡ, ಶ್ರೀನಿವಾಸ್, ಸತೀಶ್, ಜಾಕೀರ್ ಹುಸೇನ್, ವೆಂಕಟೇಶ್, ಕೃಷ್ಣರಾಜ ಗುಪ್ತ, ಮುಖಂಡರಾದ ಪಿ.ಆರ್. ರಾಚಪ್ಪ, ಮೋದೂರು ಮಹೇಶಾರಾಧ್ಯ, ಜಯರಾಂ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement