ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನಾಳೆ ಸುತ್ತೂರು ಜೆಎಸ್‌ಎಸ್ ಪ್ರೌಢಶಾಲೆ ಸುವರ್ಣ ಮಹೋತ್ಸವ

Vishwanath S
Updated On : 7 Feb 2014, 1:06 am

ಮೈಸೂರು: ಸುತ್ತೂರು ಶ್ರೀ ಕ್ಷೇತ್ರದಲ್ಲಿ 1962 ರಲ್ಲಿ ಸ್ಥಾಪಿಸಲ್ಪಟ್ಟ ಸುತ್ತೂರು ಜೆಎಸ್‌ಎಸ್ ವಸತಿ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಫೆ. 8 ರಂದು ಶಾಲಾ ಆವರಣದಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ 10.30ಕ್ಕೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಸಮಾರಂಭವನ್ನು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಉದ್ಘ್ಸುವರು. ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಅಧ್ಯಕ್ಷತೆ ವಹಿಸುವರು. ಸಾರಿಗೆ ಸಚಿವ ರಾಮಲಿಂಗರೆಡ್ಡಿ ಶಾಲಾ ನೌಕರರ ವಸತಿ ಗೃಹವನ್ನು, ಮಾಜಿ ಸಚಿವ ಬಸವರಾಜ ಹೊರಟ್ಟಿ ಹಿರಿಯ ವಿದ್ಯಾರ್ಥಿಗಳ ಸಂಘವನ್ನು, ಮಾಜಿ ಸಚಿವ ಪ್ರೊ.ಬಿ.ಕೆ. ಚಂದ್ರಶೇಖರ್ ಸುತ್ತೂರು ಶಾಲಾ ವೆಬ್‌ಸೈಟ್ ಅನ್ನು ಉದ್ಘಾಟಿಸುವರು ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಪ್ರೊ. ಎಸ್.ಪಿ. ಮಂಜುನಾಥ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಾಲಾ ಇತಿಹಾಸ: ಸುತ್ತೂರು ಶ್ರೀಕ್ಷೇತ್ರದಲ್ಲಿ 1962 ರಲ್ಲಿ 32 ವಿದ್ಯಾರ್ಥಿಗಳೊಂದಿಗೆ ಆರಂಭವಾದ ಈ ಶಾಲೆಯು 2001 ರಲ್ಲಿ ಸುಸಜ್ಜಿತ ನೂತನ ಕಟ್ಟಡಕ್ಕೆ ಸ್ಥಳಾಂತರವಾಯಿತು.  ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಉದ್ಘಾಟಿಸಿದ್ದರು. ಈಗ 880 ಜನ ವಿದ್ಯಾರ್ಥಿಗಳಿರುವ ಈ ಶಾಲೆ ಈಗ 65 ಎಕರೆ ವಿಸ್ತೀರ್ಣದಲ್ಲಿ ವ್ಯಾಪಿಸಿದೆ. ಮೂಲಭೂತ ಸೌಕರ್ಯಗಳನ್ನೊಳಗಂಡ ಶಾಲೆಯಲ್ಲಿ 100 ಮಂದಿ ಶಿಕ್ಷಕರು, 40 ಮಂದಿ ಶಿಕ್ಷಕೇತರರಿದ್ದಾರೆ. ರಾಜ್ಯದ 28 ಜಿಲ್ಲೆಗಳ, ನೆರೆ ರಾಜ್ಯಗಳಾದ ಮೇಘಾಲಯ, ಮಣಿಪುರ, ಜಾರ್ಖಂಡ್ ರಾಜ್ಯಗಳ ಬಡ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement