ಬ್ಯಾಂಕ್ ನೌಕರರ ಮುಷ್ಕರ 2ನೇ ದಿನಕ್ಕೆ
ಮೈಸೂರು: ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರ್ವಜನಿಕ ವಲಯದ ಎಲ್ಲ ಬ್ಯಾಂಕ್ಗಳ ನೌಕರರು ನಡೆಸುತ್ತಿರುವ ಮುಷ್ಕರ ಮಂಗಳವಾರವೂ ಮುಂದುವರಿಯಿತು.
ಬ್ಯಾಂಕ್ ಬಳಿ ಜಮಾಯಿಸಿದ ನೂರಾರು ಬ್ಯಾಂಕ್ ನೌಕರರು ತಮ್ಮ ವೇತನ ಪರಿಷ್ಕರಣೆಗೆ ಸರ್ಕಾರ ಕೂಡಲೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ವೇತನ ಪರಿಷ್ಕರಣೆ ಸಂಬಂಧದ ಮಾತುಕತೆ ಮುರಿದು ಬಿದ್ದ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ನಡೆಸಲಾಗುತ್ತಿದೆ. ಕೂಡಲೆ ಸರ್ಕಾರ ನಮ್ಮ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ವೇತನ ಪರಿಷ್ಕರಿಸಬೇಕು ಎಂದು ಬ್ಯಾಂಕ್ ನೌಕರರು ಒತ್ತಾಯಿಸಿದರು. ಬ್ಯಾಂಕ್ಗಳು ಕಾರ್ಯ ನಿರ್ವಹಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಗ್ರಾಹಕರು ಪರದಾಡುವಂತಾಯಿತು. ಹೆಚ್ಚಿನ ಗ್ರಾಹಕರು ಎಟಿಎಂ ಕೇಂದ್ರಗಳ ಮೊರೆ ಹೋಗಿದ್ದರು.
ಬಸವಣ್ಣ ನೇಮಕ
ಮೈಸೂರು: ಜಿಲ್ಲಾ ಜೆಡಿಎಸ್ನ ಮಹಾಪ್ರಧಾನ ಕಾರ್ಯದರ್ಶಿಯಾಗಿ ಬೀರಿಹುಂಡಿ ಬಸವಣ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಶಿಫಾರಸ್ಸಿನ ಮೇರೆಗೆ ನೇಮಿಸಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ತಿಳಿಸಿದ್ದಾರೆ.