ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಅರಣ್ಯ ಹಕ್ಕು ಜಾರಿ ಆಗದಿದ್ದರೆ ಹೋರಾಟ

Vishwanath S
Updated On : 14 Feb 2014, 12:18 pm

ಹುಣಸೂರು: ಆದಿವಾಸಿಗಳ ಅರಣ್ಯ ಹಕ್ಕಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಒಂದು ತಿಂಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳದಿದ್ದರೆ ಮೈಸೂರು, ಕೊಡಗು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯಲ್ಲಿ ವಿಭಾಗ ಮಟ್ಟದ ಬೃಹತ್ ಧರಣಿ ನಡೆಸಲು ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ತೀರ್ಮಾನಿಸಿದೆ.
ಎಚ್.ಡಿ. ಕೋಟೆ ತಾಲೂಕಿನ ಪೆಡಿನಾ ವಿಕಾಸ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಆದಿವಾಸಿಗಳ ಅರಣ್ಯ ಹಕ್ಕು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್, ಸಂಸದ ಧ್ರುವನಾರಾಯಣ್ ಮತ್ತು ಜಿಲ್ಲಾಧಿಕಾರಿ ಸಿ. ಶಿಖಾ ಅವರು ಸಭೆ ನಡೆಸಿದ್ದಾರೆ. ಆದ್ದರಿಂದ ಕೂಡಲೆ ಜಿಲ್ಲಾಡಳಿತ ಸೂಕ್ತ ತೀರ್ಮಾನ ಕೈಗೊಳ್ಳಬೇಕು. ತಪ್ಪಿದರೆ ಉಗ್ರ ಹೋರಾಟ ನಡೆಸುವುದಾಗಿ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಎಂ. ಕೃಷ್ಣಯ್ಯ ತಿಳಿಸಿದರು.
ಜಿಲ್ಲೆಯಲ್ಲಿ ಜೇನುಕುರುಬರಿಗೆ ಕೇಂದ್ರ ವಿಶೇಷ ಯೋಜನೆಯಡಿ ಮನೆ, ರಸ್ತೆ, ಸಮುದಾಯ ಭವನ ಇತರೆ ಮೂಲ ಸೌಲಭ್ಯ ಒದಗಿಸಲು 3 ವರ್ಷಗಳಿಂದ ಕಾಮಗಾರಿ ನಡೆಸಿದೆ. ಆದರೆ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ ಕಾಮಗಾರಿ ಅಪೂರ್ಣವಾಗಿದೆ. ಅಲ್ಲದೆ ಮತ್ತೆ ಕೆಲವು ಹಿಂದುಳಿದ ಹಾಡಿಗಳಲ್ಲಿನ ಆದಿವಾಸಿಗಳು ರಸ್ತೆಯಿಲ್ಲದೆ, ಮನೆಯಿಲ್ಲದೆ, ನೀರಿಲ್ಲದೆ ಅತಂತ್ರ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಅಂಥ ಹಾಡಿಗೆ ಕೂಡಲೆ 2ನೇ ಕಂತಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಪರಿಷತ್‌ನ ಸಂಘಟನಾ ಕಾರ್ಯದರ್ಶಿ ಬಿ. ಕಾವೇರ, ಕೊಡಗು ಜಿಲ್ಲಾ ಪರಿಷತ್ ಅಧ್ಯಕ್ಷ ಸಣ್ಣಯ್ಯ, ಪ್ರಧಾನ ಕಾರ್ಯದರ್ಶಿ ಮುತ್ತ ಮಾತನಾಡಿದರು. ಜಿಲ್ಲಾ ಘಟಕದ ಅಧ್ಯಕ್ಷ ವಿಜಯಕುಮಾರ್ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement