ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸಂಘಟನೆಯಿಂದ ಮುಖ್ಯವಾಹಿನಿಗೆ ಮಹಿಳೆ

Vishwanath S
Updated On : 14 Feb 2014, 12:18 pm

ಸಾಲಿಗ್ರಾಮ: ಮಹಿಳೆಯರು ಪ್ರಸ್ತುತ ದಿನಗಳಲ್ಲಿ ಸಂಘಟನೆಗಳ ಮೂಲಕ ಜಾಗೃತರಾಗಿ ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ತಾಲೂಕಿನ ಸಾಲಿಗ್ರಾಮ ಸಮೀಪದ ಹೆಬ್ಸೂರು ಗ್ರಾಮದಲ್ಲಿ ಮಹಿಳಾ ಸಂಘಟನೆಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಈ ಹಿಂದೆ ನಾನು ತಾಲೂಕಿನ ಮಹಿಳಾ ಸಂಘಟನೆಗಳ ಅಭಿವೃದ್ಧಿಗಾಗಿ ಆರ್ಥಿಕ ಸಹಾಯ ಮಾಡಿದ್ದೆ. ಮುಂದೆಯೂ ಸಹಾಯ ಮಾಡಲಾಗುವುದು ಎಂದು ಭರವಸೆ ನೀಡಿದರು. ಗ್ರಾಮದ ಆಂಜನೇಯ ದೇವಾಲಯದ ನಿರ್ಮಾಣದ ಕಾಮಗಾರಿಯನ್ನು ಸಂಪೂರ್ಣಗೊಳಿಸಿ ನನ್ನ ವೈಯಕ್ತಿಕ ಹಣದೊಂದಿಗೆ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ಭಕ್ತರಿಗೆ ಸಮರ್ಪಿಸಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಎ.ಟಿ. ಸೋಮಶೇಖರ್, ನಿವೃತ್ತ ಕೆಎಸ್‌ಆರ್‌ಟಿಸಿ ಜಿಲ್ಲಾಧಿಕಾರಿ ರಾಮೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಸೋಮಶೇಖರ್, ಅಶೋಕ್, ಎಚ್.ಜೆ. ಗೋಪಾಲ್, ಎಸಿಡಿಪಿಒ ಲೀಲಾಂಬಿಕೆ, ಮಹಿಳಾ ಒಕ್ಕೂಟದ ಅಧ್ಯಕ್ಷೆ ರತ್ನಮ್ಮ, ಜೆಡಿಎಸ್ ಮುಖಂಡರಾದ ಯೋಗೇಶ್, ಸುರೇಶ, ಅಶೋಕ್, ಮರಿಗೌಡ, ರವಿ, ಗ್ರಾಮಲೆಕ್ಕಿಗ ಪ್ರಹ್ಲಾದ್, ಲಕ್ಕಿಕುಪ್ಪೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಲ್.ಎಂ. ಪ್ರಕಾಶ್, ಅಂಗನವಾಡಿ ಕಾರ್ಯಕರ್ತೆ ಭಾಗ್ಯಮ್ಮ ಇದ್ದರು.
18ರಿಂದ ವಾಹನ ಸಂಚಾರ ಸಮೀಕ್ಷೆ
ಮೈಸೂರು: ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ಫೆ.18ರಿಂದ ಎರಡು ದಿನಗಳ ಕಾಲ ವಾಹನ ಸಂಚಾರ ಮಾದರಿ ಸಮೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಅಧೀಕ್ಷಕ ಎಂಜಿನಿಯರ್ ಸಿ. ಸತ್ಯನಾರಾಯಣ್ ಹೇಳಿದ್ದಾರೆ. ಅಂದು ಬೆಳಿಗ್ಗೆ 6ಕ್ಕೆ  ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಆಯ್ದ ಸ್ಥಳಗಳಲ್ಲಿ ಗಣತಿ ಕೇಂದ್ರಗಳನ್ನು ಸ್ಥಾಪಿಸಿ ಸಮೀಕ್ಷೆ ನಡೆಸಲಾಗುತ್ತದೆ. ಎಲ್ಲ ವಾಹನ ಚಾಲಕರು ಈ ಗಣತಿ ಕೇಂದ್ರಗಳ ಬಳಿ ತಮ್ಮ ವಾಹನವನ್ನು ನಿಧಾನವಾಗಿ ಚಲಿಸಿ, ಮುಂದೆ ಹೋಗಬೇಕೆಂದು ಅವರು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement