ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಮೂಲಸೌಕರ್ಯಕ್ಕೆ ಆದ್ಯತೆ: ಮಹದೇವ

Vishwanath S
Updated On : 14 Feb 2014, 11:27 am

ಟಿ. ನರಸೀಪುರ: ವರುಣ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯವನ್ನು ಸಮರ್ಪಕವಾಗಿ ಕಲ್ಪಿಸಲು ಜಿಪಂನಿಂದ ಅನುದಾನ ನೀಡಲಾಗಿದೆ ಎಂದು ಗರ್ಗೇಶ್ವರಿ ಜಿಪಂ ಸದಸ್ಯ ಕೆ.ಮಹದೇವ ಹೇಳಿದರು.
ತಾಲೂಕಿನ ಮನ್ನೇಹುಂಡಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಗರ್ಗೇಶ್ವರಿ ಜಿಪಂ ಕ್ಷೇತ್ರ ಸೇರುವ ಹಿನ್ನೆಲೆಯಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.
ಮನ್ನೇಹುಂಡಿ ಗ್ರಾಮದ ಮುಖ್ಯರಸ್ತೆ ಉತ್ತಮ ಗುಣಮಟ್ಟದಲ್ಲಿ ಡಾಂಬರೀಕರಣವಾಗಿರುವ ಹಿನ್ನೆಲೆಯಲ್ಲಿ ಬಸ್ಸಿಗಾಗಿ ಕಾಯುವ ಗ್ರಾಮಸ್ಥರು ನಿಲ್ಲಲು ತಂಗುದಾಣವನ್ನು 2 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ರಸ್ತೆ ಅಭಿವೃದ್ಧಿ ಸೇರಿದಂತೆ ಕುಡಿಯುವ ನೀರು, ಚರಂಡಿ ನಿರ್ಮಾಣ ಹಾಗೂ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡಗಳ ನಿರ್ಮಾಣಕ್ಕೂ ಅನುದಾನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡ ರಾಕೇಶ್ ಸಿದ್ದರಾಮಯ್ಯ, ಕಿರಗಸೂರು ಗ್ರಾಪಂ ಅಧ್ಯಕ್ಷ ಮಂಡಿ ಪ್ರಕಾಶ್, ಮಾಜಿ ಅಧ್ಯಕ್ಷ ಮನ್ನೇಹುಂಡಿ ಮಹೇಶ, ಮುಖಂಡರಾದ ಮಹದೇವ, ನಾಗರಾಜು, ದೇವರಸನಾಯಕ, ಸೀನಪ್ಪ, ಗುತ್ತಿಗೆದಾರ ಡಿ. ನಾಗರಾಜು, ಕಿರಿಯ ಎಂಜಿನಿಯರ್ ಎಚ್. ರಾಜು, ವೆಂಕಟೇಶ್, ಹೆಳವರಹುಂಡಿ ಎನ್. ಸೋಮು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement