ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸ್ವಾರ್ಥ ರಹಿತ ಸಂಘಟನೆಗೆ ಸಹಕಾರ: ಶಾಸಕ ಮಹೇಶ್

Srinivasa Murthy VN
Updated On : 16 Feb 2014, 10:32 am

ಕೆ.ಆರ್. ನಗರ: ತಾಲೂಕಿನ ಸಂಘ- ಸಂಸ್ಥೆಗಳು ಸ್ವಾರ್ಥ ಬದಿಗಿಟ್ಟು ಸಮಾಜಸೇವೆಯನ್ನೆ ಗುರಿಯಾಗಿಸಿಕೊಂಡು ಕೆಲಸ ಮಾಡಿದರೆ ಅಂತಹ ಸಂಸ್ಥೆಗಳಿಗೆ ಸದಾ ಸಹಕಾರ ನೀಡುವುದಾಗಿ ಶಾಸಕ ಸಾ.ರಾ. ಮಹೇಶ್ ಹೇಳಿದರು.
ಪಟ್ಟಣದ ಶಿವಾನುಭವ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ತಾಲೂಕು ವೀರಶೈವ ಹಿತರಕ್ಷಣಾ ವೇದಿಕೆಯ 2ನೇ ವಾರ್ಷಿಕೊತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯದ ಏಳಿಗೆಗಾಗಿ ಸಂಘ ಸಂಸ್ಥೆಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.
ಸಂಘ ಸಂಸ್ಥೆಗಳು ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ಶಿಬಿರ ನಡೆಸುವುದರ ಜತೆಗೆ ವಿದ್ಯಾರ್ಥಿಗಳಿಗೆ ಪೂರಕ ಕಾರ್ಯಕ್ರಮ ಹಮ್ಮಿಕೊಂಡು ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಅವರು ಸಲಹೆ ನೀಡಿದರು.
ವೇದಿಕೆಯ ವತಿಯಿಂದ ಆರೋಗ್ಯ ತಪಾಸಣಾ ಉಚಿತ ಶಿಬಿರ ಏರ್ಪಡಿಸಲಾಗಿತ್ತು. ಈ ವೇಳೆ ಹಿರಿಯ ಪತ್ರಕರ್ತ ಡಿ. ಮಹಾದೇವಪ್ಪ, ಸಿಪಿಐ ಎಚ್.ಎಸ್. ಜಗದೀಶ್, ವಕೀಲ ಎ.ಎಸ್. ವೀರಭದ್ರಪ್ಪ ಅವರನ್ನು ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷ ಕೆಂಪರಾಜು ಅಧ್ಯಕ್ಷತೆ ವಹಿಸಿದ್ದರು. ಬೆಟ್ಟದಪುರ ಮಠದ  ಚನ್ನಬಸವದೇಶಿಕೇಂದ್ರ ಸ್ವಾಮಿ, ಲಾಳನಹಳ್ಳಿ ಮಠದ ಜಯದೇವಿ ತಾಯಿ, ಹಿತರಕ್ಷಣಾ ವೇದಿಕೆ ಅಧ್ಯಕ್ಷ ಕೆಂಪರಾಜು, ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಚಂದ್ರಶೇಖರ್, ಮುಖಂಡರಾದ ದೊಡ್ಡಸ್ವಾಮೇಗೌಡ, ಸಿ.ವಿ. ಗುಡಿ ರಮೇಶ್, ಜಿಪಂ ಮಾಜಿ ಉಪಾಧ್ಯಕ್ಷ ಎ.ಎಸ್. ಚನ್ನಬಸಪ್ಪ, ಪುರಸಭಾ ಮಾಜಿ ಉಪಾದ್ಯಕ್ಷೆ ಕೆ.ಎಂ. ನಾಗರತ್ನ, ಸಂಘದ ಕಾರ್ಯದರ್ಶಿ ಸಣ್ಣಲಿಂಗಪ್ಪ, ಸಹ ಕಾರ್ಯದರ್ಶಿ ಸಿ.ಎಸ್. ಜಗದೀಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement