ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಚುಂಚನಕಟ್ಟೆಯಲ್ಲಿ ಬಸ್ ನಿಲ್ದಾಣ ನಿರ್ಮಾಣ

Rashmi Kasaragodu
Updated On : 18 Feb 2014, 2:23 am

ಕೆ.ಆರ್. ನಗರ: ತಾಲೂಕಿನ ಚುಂಚನಕಟ್ಟೆ ಹೋಬಳಿ ಕೇಂದ್ರದಲ್ಲಿ ಬಸ್ ನಿಲ್ದಾಣ ನಿರ್ಮಿಸಲು ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ಪಟ್ಟಣದ ಗಣಪತಿ ದೇವಾಲಯದಲ್ಲಿ ಸಾರಿಗೆ ಸಂಸ್ಥೆ ನೌಕರರ ಸಂಘ ಇತ್ತೀಚೆಗೆ ಆಯೋಜಿಸಿದ್ದ ಆದಿಚುಂಚನಗಿರಿ ಸ್ವಾಮೀಜಿಗಳ ಪ್ರಥಮ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭೇರ್ಯ ಗ್ರಾಮದಲ್ಲಿ ನಿಲ್ದಾಣ ನಿರ್ಮಿಸಲು 60 ಲಕ್ಷ ಮಂಜೂರು ಮಾಡಿಸಿ ಸ್ಥಳ ಗುರುತಿಸಲಾಗಿದೆ. ಹೊಸೂರು ಮತ್ತು ಮಿರ್ಲೆ ಗ್ರಾಮಗಳ ನಿಲ್ದಾಣದ ಆವರಣವನ್ನು ಕಾಂಕ್ರಿಟೀಕರಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ವಿದ್ಯಾರ್ಥಿಗಳ ಬಸ್ಪಾಸ್ ಹಣವನ್ನು ಸರ್ಕಾರ ಸಾರಿಗೆ ಸಂಸ್ಥೆಗೆ ಸಂದಾಯ ಮಾಡುತ್ತಿದ್ದು, ಸಾರಿಗೆ ನಿರ್ವಾಹಕರು ವಿದ್ಯಾರ್ಥಿಗಳನ್ನು ಉಚಿತವಾಗಿ ಕರೆದೊಯ್ಯುವ ರೀತಿ ವರ್ತಿಸಬಾರದು ಎಂದು ಸಲಹೆ ನೀಡಿದ ಶಾಸಕರು, ಪಟ್ಟಣಕ್ಕೆ ಐಟಿಐ ಕಾಲೇಜು ಮಂಜೂರಾಗಿದೆ ಎಂದರು. ಸಾರಿಗೆ ಇಲಾಖೆಯ  ಗ್ರಾಮಾಂತರ ಜಿಲ್ಲಾ ಅಧಿಕಾರಿ ಶ್ರೀನಿವಾಸ್, ಘಟಕದ ವ್ಯವಸ್ಥಾಪಕ ಕೃಷ್ಣಮೂರ್ತಿ ಸೇರಿದಂತೆ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement