ಸಂಸ್ಕೃತಿ ಇಲಾಖೆಯಿಂದ ನಾಳೆ ಛತ್ರಪತಿ ಶಿವಾಜಿ ಜಯಂತಿ
ಮೈಸೂರು: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಛತ್ರಪತಿ ಶಿವಾಜಿ ಜಯಂತ್ಯುತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಎಂಜಿನಿಯರುಗಳ ಸಂಸ್ಥೆಯ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಫೆ.19 ರಂದು ಶಿವಾಜಿ ಜಯಂತಿ ಏರ್ಪಡಿಸಲಾಗಿದೆ. ಬೆಳಗ್ಗೆ 9.30ಕ್ಕೆ ಅರಮನೆ ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಛತ್ರಪತಿ ಶಿವಾಜಿ ಜಯಂತ್ಯುತ್ಸವ ಸಮಿತಿ ಆಯೋಜಿಸಿರುವ ಮೆರವಣಿಗೆಗೆ ಮೇಯರ್ ಎನ್.ಎಂ. ರಾಜೇಶ್ವರಿ ಮೆರವಣಿಗೆ ಚಾಲನೆ ನೀಡುವರು. ಬೆಳಗ್ಗೆ 10.30ಕ್ಕೆ ಗಂಗೋತ್ರಿ ರಂಗಸ್ವಾಮಿ ತಂಡದಿಂದ ಭಕ್ತಿಗೀತೆ ಆಯೋಜಿಸಿದೆ. ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಉದ್ಘಾಟಿಸುವರು. ಪೊನ್ನಂಪೇಟೆಯ ರಾಮಕೃಷ್ಣ ಶಾರದಾ ಆಶ್ರಮದ ಬುದ್ಧಿ ಯೋಗಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ನಗರದ ಸಮಸ್ತ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮೈಸೂರು ಡಿಸ್ಟ್ರಿಕ್ಟ್ ಮರಾಠ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಜಿ. ಸುರೇಶ್ಬಾಬು ಮನವಿ ಮಾಡಿದ್ದಾರೆ.