23ರಂದು ಬಲಿಜ ವಧುವರ ಸಮಾವೇಶ
ಭೇರ್ಯ: ಶಿವಮೊಗ್ಗ ಜಿಲ್ಲಾ ಬಲಿಜ ಸೇವಾ ಸಂಘದ ವತಿಯಿಂದ ಬಲಿಜ ವಧುವರರ ಸಮಾವೇಶವು ಶಿವಮೊಗ್ಗದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ಫೆ.23ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಕೆ. ಶಿವಕುಮಾರ್ ಹೇಳಿದ್ದಾರೆ. ಅಂದು ಬೆಳಗ್ಗೆ 9.30ಕ್ಕೆ ಬಲಿಜ ವಧುವರರ ಸಮಾವೇಶವನ್ನು ಮೀನಾ ತೂಗದೀಪ್ ಉದ್ಘಾಟಿಸುವರು. ಮೈಸೂರು, ಮಂಡ್ಯ, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿರುವ ಜನಾಂಗದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಾ. ಶಿವಕುಮಾರ್, 944879003 ಸಂಪರ್ಕಿಸಬಹುದು.