'ಎಲ್ಲರಿಗೂ ಕಂಪ್ಯೂಟರ್ ಜ್ಞಾನ ಅಗತ್ಯ'
ಕೆ.ಆರ್. ನಗರ: ಆಧುನಿಕ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಎಲ್ಲರಿಗೂ ಅತ್ಯಂತ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ಪಠ್ಯ ಚುಟುವಟಿಕೆಗಳ ಜತೆಗೆ ಕಡ್ಡಾಯವಾಗಿ ಕಂಪ್ಯೂಟರ್ ಶಿಕ್ಷಣ ಪಡೆದುಕೊಳ್ಳಬೇಕು ಎಂದು ರಾವಂದೂರು ಮುರುಘಾಮಠದ ಮೋಕ್ಷಪತಿ ಶ್ರೀಗಳು ಹೇಳಿದರು.
ಪಟ್ಟಣದ ಸ್ಪಿನ್ ಕಂಪ್ಯೂಟರ್ ಸೆಂಟರ್ನಲ್ಲಿ ಕೇಂದ್ರ ಸರ್ಕಾರ ಮತ್ತು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ವತಿಯಿಂದ ನೂತನವಾಗಿ ಆರಂಭಿಸಿರುವ ಕೋರ್ಸ್ಗಳ ಆರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ಸ್ಪಿನ್ ಕಂಪ್ಯೂಟರ್ ವ್ಯವಸ್ಥಾಪಕ ಕೃಷ್ಣ, ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿಯ ಸಂಯೋಜಕ ರಾಘವೇಂದ್ರ ಬುಗುಡೆ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣನ್, ತಾ. ಸರ್ವೋದಯ ಪಕ್ಷದ ಅಧ್ಯಕ್ಷ ಗರುಡಗಂಭದ ಸ್ವಾಮಿ, ಯೋಗಗುರು ಮುದ್ದುಕೃಷ್ಣ ಮಾತನಾಡಿದರು. ತಾ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕುಪ್ಪೆ ಮಹದೇವಸ್ವಾಮಿ, ಪ್ರಧಾನ ಕಾರ್ಯದರ್ಶಿ ನಾಗೇಶ್, ಹಿರಿಯ ಛಾಯಾಗ್ರಾಹಕಿ ಶಿಲ್ಪಾ ಶ್ರೀನಿವಾಸ್ ಇದ್ದರು.