ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ: ಬುತೆಲೊ
ಪಿರಿಯಾಪಟ್ಟಣ: ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ ಎಂದು ಜಿಲ್ಲಾ ಬಿಜೆಪಿ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ವಾಲ್ಟರ್ ಬುತೆಲೊ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಅಲ್ಪಸಂಖ್ಯಾತರ ಘಟಕದ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿ, ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಹಜ್ ಭವನಕ್ಕೆ 49 ಕೋಟಿ ನೀಡಿತ್ತು ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎಂ.ಎಂ. ರಾಜೇಗೌಡ, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿದರು.
ರಾಜ್ಯ ಕಾರ್ಯಕಾರಿಣಿ ಸದಸ್ಯ ಸಫೀನಾ ತಾಜ್, ಜಿಲ್ಲಾ ಕಾರ್ಯದರ್ಶಿ ಶಾಂತಿ ಬುತೆಲೋ, ಪ್ರಧಾನ ಕಾರ್ಯದರ್ಶಿ ಮುಗ್ದು ಹುಸೇನ್, ನಮೋ ಬ್ರಿಗೇಡ್ ಸದಸ್ಯ ವಿ.ವಿ.ಎನ್. ಬುತೆಲೋ, ಸಿ.ಕೆ. ಪ್ರಸನ್ನಕೇಶವ, ಲೋಕಪಾಲಯ್ಯ, ರವಿ, ಸೋಹನ್, ವಾಜಿದ್ ಪಾಷ ಇದ್ದರು.