ಯುವಕ ನಾಪತ್ತೆ
ಮೈಸೂರು: ನಗರದ ಕೆ.ಆರ್. ಠಾಣೆ ವ್ಯಾಪ್ತಿಯ ನಿವಾಸಿ ಎಂ.ಎಸ್. ಶ್ರೀನಿವಾಸ್ ಎಂಬವರ ಪುತ್ರ ಎಂ.ಎಸ್. ನರಸಿಂಹಪ್ರಸಾದ್ (24) ಫೆ.10ರಿಂದ ನಾಪತ್ತೆಯಾಗಿದ್ದಾರೆ. ಚಹರೆ- 5.5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ಕನ್ನಡ ಮತ್ತು ಇಂಗ್ಲಿಷ್ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ. 0821- 2418319, 519 ಸಂಪರ್ಕಿಸಲು ಕೆ.ಆರ್. ಠಾಣೆ ಪೊಲೀಸರು ಕೋರಿದ್ದಾರೆ.
ಕೂರ್ಗ್ ಐಟಿ ತಂಡಕ್ಕೆ ಜಯ
ಮೈಸೂರು: ಕೆಎಸ್ಸಿಎ ಆಯೋಜಿಸಿದ್ದ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿಯಲ್ಲಿ ಡಿ. ಬನುಮಯ್ಯ ಕಾಲೇಜು ವಿರುದ್ಧ, ಕೂರ್ಗ್ ಐಟಿ ಕಾಲೇಜು ತಂಡ ಆರು ವಿಕೆಟ್ಗಳ ಜಯ ದಾಖಲಿಸಿದೆ. ಎಸ್ಜೆಸಿಇ ಕಾಲೇಜು ಮೈದಾನದಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಕೂರ್ಗ್ ಐಟಿ ಕಾಲೇಜು ತಂಡ 27.2 ಓವರ್ಗೆ ಆರು ವಿಕೆಟ್ ನಷ್ಟಕ್ಕೆ 122 ರನ್ ಗಳಿಸಿತು. ತಂಡದ ಪರ ಗೌತಮ್(43) ರನ್ ಗಳಿಸಿದರು. ಇದಕ್ಕೆ ಪ್ರತಿಯಾಗಿ ಡಿ. ಬನುಮಯ್ಯ ಕಾಲೇಜು ತಂಡ 31.2 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 119 ರನ್ ಗಳಿಸಿತು. ತಂಡದ ಪರ ದಿನೇಶ್(33) ರನ್ ಗಳಿಸಿದ್ದು ಬಿಟ್ಟರೆ, ಉಳಿದವರ್ಯಾರು ಹೆಚ್ಚು ಕಾಲ ಸ್ಕ್ರೀಜ್ನಲ್ಲಿ ನಿಲ್ಲಲಿಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.