ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಪ್ರವಾಸಿ ಟ್ಯಾಕ್ಸಿ; ಸಹಾಯಧನಕ್ಕೆ ಅರ್ಜಿ ಆಹ್ವಾನ

Rashmi Kasaragodu
Updated On : 20 Feb 2014, 2:21 am

ಮೈಸೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ 20ರಿಂದ 45 ವರ್ಷ ವಯೋವುತಿಯೊಳಗಿನ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿಗಳಿಗೆ ತಗಲುವ ಒಟ್ಟು ವೆಚ್ಚದಲ್ಲಿ 2 ಲಕ್ಷವನ್ನು ಇಲಾಖೆಯಿಂದ ಸಹಾಯಧನ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. ಪ್ರವಾಸಿ ಟ್ಯಾಕ್ಸಿಯು ಶೇ.5ರಷ್ಟನ್ನು ಫಲಾನುಭವಿಗಳು ಭರಿಸಲು ಹಾಗೂ ಉಳಿದ ಮೊತ್ತವನ್ನು ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್ ಮೂಲಕ ಸಾಲ ಸೌಲಭ್ಯ ಪಡೆಯಬಹುದು. ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿದ್ದು ಲಘುವಾಹನ ಚಾಲನಾ ಪರವಾನಗಿ ಪಡೆದು ಕನಿಷ್ಠ ಒಂದು ವರ್ಷ ಆಗಿರಬೇಕು. ಅರ್ಜಿಗಳನ್ನು ವಿಭಾಗೀಯ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ನಂ. 2, ಹೊಟೇಲ್ ಮಯೂರ ಹೊಯ್ಸಳ ಕಾಂಪ್ಲೆಕ್ಸ್, ಜೆಎಲ್ಬಿ ರಸ್ತೆ, ಮೈಸೂರು ಇಲ್ಲಿ ಮಾ. 3ರೊಳಗೆ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಯೊಂದಿಗೆ ಸೀಲ್ ಮಾಡಿದ ಲಕೋಟೆಯಲ್ಲಿ ಮಾ. 17 ರೊಳಗೆ ಖುದ್ದಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ. 0821- 2422096 ಅಥವಾ 2421833 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement