ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Rashmi Kasaragodu
Updated On : 21 Feb 2014, 1:19 am

ಮೈಸೂರು: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ಈಗಾಗಲೇ ಮಾಡಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾ. 23ರಂದು ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಅರ್ಹತೆ ಮತ್ತು ಮೀಸಲಾತಿಯಂತೆ ಪಟ್ಟಿ ತಯಾರಿಸಿ, ಮೆರಿಟ್ ಆಧಾರದ ಮೇಲೆ ಮೀಸಲಾತಿ ಅನ್ವಯ ಕೌನ್ಸೆಲಿಂಗ್ ಮೂಲಕ ಆಯ್ಕೆ ಮಾಡಲಾಗುವುದು. ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪರೀಕ್ಷೆಗೆ ಬೇಕಾದ ಅರ್ಜಿಗಳು ಜಿಲ್ಲೆಯ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳ ಕಚೇರಿಗಳಲ್ಲಿ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿ, ತಾಲೂಕು ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ ಲಭ್ಯವಿರುತ್ತವೆ. ಸಂಬಂಧಪಟ್ಟ ವಸತಿ ಶಾಲಾ ಪ್ರವೇಶ ಪರೀಕ್ಷಾ ಅರ್ಜಿ ಸ್ವೀಕೃತಿ ಕೇಂದ್ರದ ಪ್ರಾಂಶುಪಾಲರಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಫೆ. 24 ಕೊನೆ ದಿನ. ಮಾ. 23ರ ಬೆಳಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ. ಏ. 7ರಂದು ಅರ್ಹತಾ ಪಟ್ಟಿ ಪ್ರಕಟವಾಗಲಿದೆ. ಏ. 21ರಿಂದ ಪ್ರಾರಂಭವಾಗಿ ಮೇ 14ರವರೆಗೆ ಆಯಾ ಜಿಲ್ಲೆಗಳಲ್ಲಿ ಕೌನ್ಸೆಲಿಂಗ್ ನಡೆಯುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement