ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಅನ್ನಭಾಗ್ಯದ ಲಾಭ ಅರ್ಹರಿಗೆ ತಲುಪಿಸಿ'

Rashmi Kasaragodu
Updated On : 21 Feb 2014, 1:20 am


ಕೆ.ಆರ್. ನಗರ: ರಾಜ್ಯವನ್ನು ಹಸಿವು ಮುಕ್ತವನ್ನಾಗಿಸಲು ಸರ್ಕಾರ ಅನ್ನಭಾಗ್ಯ ಯೋಜನೆಯಂಥ ಬಡವರ ಪರ ಉತ್ತಮವಾದ ಯೋಜನೆಯನ್ನು ಜಾರಿಗೆ ತಂದಿದ್ದು, ಅಧಿಕಾರಿಗಳು ಯೋಜನೆಯನ್ನು ಅರ್ಹರಿಗೆ ತಲುಪಿಸುವ ಜವಾಬ್ದಾರಿ ಹೊರಬೇಕು ಎಂದು ಜಿಪಂ ಸದಸ್ಯ ರಾಜಯ್ಯ ಹೇಳಿದರು.
ಪಟ್ಟಣದ ಟಿಎಪಿಸಿಎಂಎಸ್ ರೈತ ಸಮುದಾಯ ಭವನದಲ್ಲಿ ಆಹಾರ ಇಲಾಖೆಯ ವತಿಯಿಂದ ನ್ಯಾಯಬೆಲೆ ಅಂಗಡಿ ಮಾಲೀಕರು ಮತ್ತು ಅಧಿಕಾರಿಗಳಿಗೆ ಆಯೋಜಿಸಿದ್ದ ಅನ್ನಭಾಗ್ಯ ಯೋಜನೆಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಅತಿ ದೊಡ್ಡ ಪ್ರಮಾಣದಲ್ಲಿ ಆಹಾರ ಧಾನ್ಯ ನೀಡುವ ರಾಜ್ಯ ಕರ್ನಾಟಕವಾಗಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾರ್ಯಕ್ರಮಗಳಿಗಿಂತಲೂ ಸಿದ್ದರಾಮಯ್ಯನವರ ಸರ್ಕಾರ ಹೆಚ್ಚು ಸವಲತ್ತುಗಳನ್ನು ನೀಡುತ್ತಿರುವುದನ್ನು ಕಾಣುತ್ತಿದ್ದೇವೆ ಎಂದರು.
ಆಹಾರ ಇಲಾಖೆಯ ಉಪನಿರ್ದೇಶಕ ಡಾ.ಕಾ. ರಾಮೇಶ್ವರಪ್ಪ, ತಾ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎಸ್. ಯದುಗಿರೀಶ್, ಇಒ ಸಿದ್ದಲಿಂಗಮೂರ್ತಿ, ಬಿಇಒ ಎಸ್.ಟಿ. ಜವರೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement