ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಅವಿಶ್ವಾಸ ಗೊತ್ತುವಳಿ; ಗ್ರಾಪಂ ಅಧ್ಯಕ್ಷೆ ಪದಚ್ಯುತಿ

Rashmi Kasaragodu
Updated On : 21 Feb 2014, 1:17 am

ಕೆ.ಆರ್. ನಗರ; ತಾಲೂಕಿನ ಅಡಗೂರು ಗ್ರಾಪಂ ಅಧ್ಯಕ್ಷೆ ಹೇಮಲತಾ ಅವರನ್ನು ಅವಿಶ್ವಾಸ ಗೊತ್ತುವಳಿ ಮೂಲಕ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಲಾಯಿತು. ಮಂಗಳವಾರ ಪಂಚಾಯ್ತಿ ಕಚೇರಿಯಲ್ಲಿ ಗ್ರಾಪಂ ಅಧ್ಯಕ್ಷೆ ಹೇಮಲತಾ ವಿರುದ್ಧ ಅವಿಶ್ವಾಸ ಗೊತ್ತುವಳಿಯ ಮಂಡನಾ ಸಭೆಯು ಹುಣಸೂರು ಉಪವಿಭಾಗಾಧಿಕಾರಿ ಜಗದೀಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಗೊತ್ತುವಳಿ ಪರ 13 ಮಂದಿ ಮತ ಚಲಾಯಿಸಿ ಪದಚ್ಯುತಿಗೊಳಿಸಿದರು. 6 ಮಂದಿ ಗೈರಾಗಿದ್ದರು. ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಮುಖ ನಿರ್ಧಾರ ಕೈಗೊಳ್ಳುವುದು ಮತ್ತು ಪಂಚಾಯ್ತಿ ಕಚೇರಿಗೆ ಆಗಮಿಸಿ ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸದೆ ಇರುವ ಹಿನ್ನೆಲೆಯಲ್ಲಿ ಗ್ರಾಪಂ ಸದಸ್ಯ ಡಿ.ಎಸ್. ಸ್ವಾಮೀಗೌಡ ನೇತೃತ್ವದ 16 ಮಂದಿ ಗ್ರಾಪಂ ಸದಸ್ಯರು ಅಧ್ಯಕ್ಷೆ ಹೇಮಲತಾ ವಿರುದ್ಧ ಅವಿಶ್ವಾಸ ಗೊತ್ತುವಳಿಯನ್ನು ಉಪ ವಿಭಾಗಾಧಿಕಾರಿಗೆ ಸಲ್ಲಿಸಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement